ಬೆಂಗಳೂರು: ಹೃದಯ ಸಂಬಂಧಿ ಶಸ್ತ್ರಚಿಕಿತ್ಸೆಗಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಇಂದು ಚೆನ್ನೈಗೆ ತೆರಳಲಿದ್ದಾರೆ.
ಆರೋಗ್ಯ ತಪಾಸಣೆ, ಪರೀಕ್ಷೆಗಳ ನಂತರ ಮಾರ್ಚ್ 21ರಂದು ಶಸ್ತ್ರಚಿಕಿತ್ಸೆಗೆ ಒಳಗಾಗಲಿರುವ ಅವರು ಚಿಕಿತ್ಸೆ ಬಳಿಕ ಮಾರ್ಚ್ 24ರ ವರೆಗೆ ಆಸ್ಪತ್ರೆಯಲ್ಲಿ ವಿಶ್ರಾಂತಿ ಪಡೆಯಲಿದ್ದಾರೆ. ಚೆನ್ನೈನಿಂದ ವಾಪಸ್ ಆದ ನಂತರ ಲೋಕಸಭೆ ಚುನಾವಣೆಯಲ್ಲಿ ತಾವು ಸ್ಪರ್ಧಿಸುವ ಬಗ್ಗೆ ನಿರ್ಧಾರ ಪ್ರಕಟಿಸಲಿದ್ದಾರೆ.
ಹಾಸನ, ಮಂಡ್ಯ, ಕೋಲಾರ ಕ್ಷೇತ್ರದಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದ್ದು, ಅಭ್ಯರ್ಥಿಗಳ ಹೆಸರನ್ನು ಕೂಡ ಪ್ರಕಟಿಸಲಿದ್ದಾರೆ.