ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಈ ಬಾರಿ ಆರು ಕ್ಷೇತ್ರಗಳಲ್ಲಿ ಮಹಿಳೆಯರಿಗೆ ಟಿಕೆಟ್ ನೀಡುವ ಸಾಧ್ಯತೆ ಇದೆ. ಈಗಾಗಲೇ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಗೀತಾ ಶಿವರಾಜ್ ಕುಮಾರ್ ಗೆ ಟಿಕೆಟ್ ಘೋಷಣೆಯಾಗಿದೆ.
ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಅಂಜಲಿ ನಿಂಬಾಳ್ಕರ್, ದಾವಣಗೆರೆ ಲೋಕಸಭಾ ಕ್ಷೇತ್ರದಿಂದ ಶಾಮನೂರು ಶಿವಶಂಕರಪ್ಪ ಸೊಸೆ ಪ್ರಭಾ ಮಲ್ಲಿಕಾರ್ಜುನ್ ಅವರ ಹೆಸರನ್ನು ಫೈನಲ್ ಮಾಡಲಾಗಿದ್ದು, ಅಧಿಕೃತ ಘೋಷಣೆಯಷ್ಟೇ ಬಾಕಿ ಇದೆ.
ಬಾಗಲಕೋಟೆ ಕ್ಷೇತ್ರದಿಂದ ಸಚಿವ ಶಿವಾನಂದ ಪಾಟೀಲ್ ಪುತ್ರಿ ಸಂಯುಕ್ತ ಪಾಟೀಲ್ ಅವರಿಗೆ ಟಿಕೆಟ್ ಸಿಗುವ ಸಾಧ್ಯತೆ ಇದೆ. ವೀಣಾ ಕಾಶಪ್ಪನವರ್ ಕೂಡ ಆಕಾಂಕ್ಷಿಯಾಗಿದ್ದಾರೆ. ಚಿಕ್ಕೋಡಿ ಲೋಕಸಭೆ ಕ್ಷೇತ್ರದಿಂದ ಸಚಿವ ಸತೀಶ್ ಜಾರಕಿಹೊಳಿ ಪುತ್ರಿ ಪ್ರಿಯಾಂಕಾ ಜಾರಕಿಹೊಳಿ, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಸಚಿವ ರಾಮಲಿಂಗಾರೆಡ್ಡಿ ಪುತ್ರಿ ಸೌಮ್ಯಾ ರೆಡ್ಡಿ ಸ್ಪರ್ಧಿಸುವ ಸಾಧ್ಯತೆ ಇದೆ.