ಬೆಂಗಳೂರು : ಬೆಂಗಳೂರಿನ ಮೊಬೈಲ್ ಶಾಪ್ ನಲ್ಲಿ ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಯುವಕನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಪೊಲೀಸರು ಬಂಧಿಸಿದ್ದಾರೆ.
ಯುವಕ ನೀಡಿದ ದೂರಿನ ಮೇರೆಗೆ ಹಲ್ಲೆ ಮಾಡಿದ್ದ ಸುಲೇಮಾನ್, ತರುಣ್, ಶನವಾಜ್, ರೋಹಿತ್, ಡ್ಯಾನಿಶ್ ವಿರುದ್ಧ ಪೊಲೀಸರು ಐಪಿಸಿ ಸೆಕ್ಷನ್ 506, 504, 149, 307, 323 ಹಾಗೂ 324ರ ಅಡಿಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ. ಪ್ರಕರಣ ಸಂಬಂಧ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನ ತರಗಪೇಟೆಯಲ್ಲಿ ಕಿಡಿಗೇಡಿಗಳು ಮೊಬೈಲ್ ಶಾಪ್ ನಡೆಸುತ್ತಿದ್ದ ಯುವಕನ ಮೇಲೆ ಮನಸೋಇಚ್ಛೆ ಹಲ್ಲೆ ನಡೆಸಿದ್ದರು. ಮೊಬೈಲ್ ಬಿಡಿಭಾಗಗಳ ಅಂಗಡಿ ನಡೆಸುತ್ತಿದ್ದ ಮುಕೇಶ್ ಎಂಬುವವರ ಮೇಲೆ ಕಿಡಿಗೇಡಿಗಳು ಹಲ್ಲೆ ನಡೆಸಿದ್ದು, ದುಷ್ಕರ್ಮಿಗಳ ದಾಂಧಲೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಮುಖೇಶ್ ಪ್ರಕರಣ ದಾಖಲಿಸಿದ್ದಾರೆ.ಮೊಬೈಲ್ ಅಂಗಡಿಯಲ್ಲಿ ಹನುಮಾನ್ ಚಾಲೀಸ್ ಹಾಕಿದ್ದಕ್ಕೆ ಕಿರಿಕ್ ತೆಗೆದ ಕಿಡಿಗೇಡಿಗಳು ಹಲ್ಲೆ ನಡೆಸಿದ್ದಾರೆ ಎಂದು ಮುಖೇಶ್ ಹೇಳಿದ್ದರು. ಮೊಬೈಲ್ ಅಂಗಡಿ ಮಾಲೀಕನ ಮೇಲೆ ಹಲ್ಲೆ ನಡೆಸಿದ ದೃಶ್ಯಗಳು ಸಿಸಿಟಿಯಲ್ಲಿ ಸೆರೆಯಾಗಿದೆ. ಗೂಂಡಾ ಬ್ರದರ್ಸ್ಗಳನ್ನು ಬಂಧಿಸಿ ಕ್ರಮಕೈಗೊಳ್ಳದೆ ಹೋದರೆ, ಉಗ್ರ ಹೋರಾಟ ಎದುರಿಸಬೇಕಾಗುತ್ತದೆ ಎಚ್ಚರ ಎಂದು ಬಿಜೆಪಿ ಎಚ್ಚರಿಕೆ ನೀಡಿತ್ತು.