ಬೆಂಗಳೂರು : ಹಾಡಹಗಲೇ ಬೆಂಗಳೂರಿನಲ್ಲಿ ಜ್ಯುವೆಲ್ಲರಿ ಶಾಪ್ ಗೆ ನುಗ್ಗಿ ದುಷ್ಕರ್ಮಿಗಳು ಫೈರಿಂಗ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿತ್ತು, ಈ ಪೈಕಿ ಓರ್ವ ಮೃತಪಟ್ಟಿದ್ದಾನೆ.
ಬೆಂಗಳೂರಿನ ಕೊಡಿಗೇಹಳ್ಳಿ ವ್ಯಾಪ್ತಿಯ ದೇವೀನಗರದ ಲಕ್ಷ್ಮೀ ಬ್ಯಾಂಕರ್ಸ್ ಜ್ಯುವೆಲ್ಲರಿಯಲ್ಲಿ ದುಷ್ಕರ್ಮಿಗಳು ಫೈರಿಂಗ್ ಮಾಡಿ ಚಿನ್ನಾಭರಣ ದೋಚಲು ಯತ್ನಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಖಾನಾ ಪಂಡಿತ್, ಆಶು ಪಂಡಿತ್, ಮೋಸೆ ಅಲಿಯಾಸ್ ಬಂಡಿ ಹಾಗೂ ಸೂರಜ್ ನನ್ನು ಪೊಲೀಸರು ಬಂಧಿಸಿದ್ದಾರೆ.
ದುಷ್ಕರ್ಮಿಗಳ ಗುಂಡೇಟಿಗೆ ಅಪ್ಪುರಾಮ್, ಅಭಿರಾಮ್ ಎಂಬುವವರಿಗೆ ಗಾಯಗಳಾಗಿತ್ತು, ಗುಂಡಿನ ದಾಳಿ ನಡೆಸಿದ ದುಷ್ಕರ್ಮಿಗಳು ಪರಾರಿಯಾಗಿದ್ದರು. ನಂತರ ತನಿಖೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರು. ಈ ಪೈಕಿ ಸೂರಜ್ ಗಂಟಲಿಗೆ ಗುಂಡೇಟು ತಗುಲಿತ್ತು, ಜ್ಯುವೆಲ್ಲರಿ ಶಾಪ್ ಮಾಲೀಕನಿಗೆ ಗುಂಡು ಹಾರಿಸುವಾಗ ಆಕಸ್ಮಾತ್ ಆಗಿ ಒಂದು ಗುಂಡು ಸೂರಜ್ ಗಂಟಲಿಗೆ ತಾಗಿತ್ತು. ಇದೀಗ ಆತನು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.
ಮಾ.14 ರಂದು ಕೊಡಿಗೇಹಳ್ಳಿ ವ್ಯಾಪ್ತಿಯ ದೇವೀನಗರದ ಲಕ್ಷ್ಮೀ ಬ್ಯಾಂಕರ್ಸ್ ಜ್ಯುವೆಲ್ಲರಿಗೆ ನುಗ್ಗಿದ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದರು. ನಂತರ ತನಿಖೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರು.