ಬೆಂಗಳೂರಿನ ಬದಲು ಆಯಾ ಜಿಲ್ಲೆಗಳಲ್ಲೇ ಸಿಇಟಿ ಪರೀಕ್ಷೆಗೆ ವಿದ್ಯಾರ್ಥಿಗಳ ಒತ್ತಾಯ

ಬೆಂಗಳೂರು: ಮಾರ್ಚ್ 18ರಿಂದ 20ರವರೆಗೆ ಸಿಇಟಿ ನೋಂದಣಿಗೆ ನೀಡಿದ ವಿಶೇಷ ಅವಕಾಶದ ವೇಳೆ ಅರ್ಜಿ ಸಲ್ಲಿಸಿದವರು ಪರೀಕ್ಷೆಗೆ ಬರೆಯಲು ಬೆಂಗಳೂರಿಗೆ ಬರಬೇಕೆಂಬ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನಿಬಂಧನೆಗೆ ಅಭ್ಯರ್ಥಿಗಳಿಂದ ಆಕ್ಷೇಪ ವ್ಯಕ್ತವಾಗಿದೆ.

ಪ್ರಾಧಿಕಾರದ ಅಧಿಕಾರಿಗಳು ಏಕಾಏಕಿ ಕೈಗೊಂಡ ಈ ನಿರ್ಧಾರದಿಂದ ಸಾವಿರಾರು ಅಭ್ಯರ್ಥಿಗಳಿಗೆ ತೊಂದರೆಯಾಗುತ್ತದೆ ಎಂದು ಹೇಳಲಾಗಿದೆ. ಬೆಂಗಳೂರುನಲ್ಲಿ ಪರೀಕ್ಷೆ ಬರೆಯಲು ದೂರದ ಬೆಳಗಾವಿ, ಬೀದರ್, ಬಾಗಲಕೋಟೆ ಸೇರಿದಂತೆ ಉತ್ತರ ಕರ್ನಾಟಕ ಭಾಗದ ಅಭ್ಯರ್ಥಿಗಳು ಒಂದೆರಡು ದಿನ ಮೊದಲೇ ಬೆಂಗಳೂರಿಗೆ ಬರಬೇಕಾಗುತ್ತದೆ. ಇದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತದೆ. ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಪ್ರಾಧಿಕಾರ ನಿರ್ಧಾರ ಹಿಂಪಡೆದು ಕೊನೆಯ ಹಂತದಲ್ಲಿ ನೋಂದಣಿ ಮಾಡಿಸಿದವರಿಗೂ ಆಯಾ ಜಿಲ್ಲೆಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಬೇಕೆಂದು ವಿನಂತಿಸಲಾಗಿದೆ.

ಬೆಂಗಳೂರಿಗೆ ಬಂದು ಪರೀಕ್ಷೆ ಬರೆಯಲು ಹಣ, ಸಮಯ ವ್ಯರ್ಥವಾಗುತ್ತದೆ. ಲಕ್ಷಾಂತರ ಜನ ಏಕಕಾಲಕ್ಕೆ ಬೆಂಗಳೂರಿಗೆ ಬರುವುದಕ್ಕೆ ಸಮಸ್ಯೆ ಆಗುತ್ತಿದ್ದ ಕಾರಣಕ್ಕೆ ಸರ್ಕಾರ ಅನೇಕ ವರ್ಷಗಳಿಂದ ಜಿಲ್ಲಾ ಹಂತದಲ್ಲಿ ಸಿಇಟಿ ಪರೀಕ್ಷೆ ನಡೆಸುತ್ತಿದೆ. ಇದರಿಂದ ಅಭ್ಯರ್ಥಿಗಳು ತಮ್ಮ ಜಿಲ್ಲೆಯಲ್ಲಿ ಪರೀಕ್ಷೆ ಬರೆಯಬಹುದಾಗಿದೆ. ಈಗ ಬೆಂಗಳೂರಿಗೆ ಹೋಗಿ ಪರೀಕ್ಷೆ ಬರೆಯಲು ತೊಂದರೆಯಾಗುವುದರಿಂದ ಆಯಾ ಜಿಲ್ಲೆಗಳಲ್ಲಿ ಪರೀಕ್ಷೆಗೆ ಅವಕಾಶ ನೀಡಬೇಕೆಂದು ಒತ್ತಾಯಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read