ಬೆಂಗಳೂರು : ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ನಾಳೆ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ನಡೆಯಲಿದೆ ಎಂದು ತಿಳಿದು ಬಂದಿದೆ.
ಈಗಾಗಲೇ ಆಸ್ಪತ್ರೆಗೆ ದಾಖಲಾಗಿರುವ ಕುಮಾರಸ್ವಾಮಿ ಅವರಿಗೆ ಕೆಲವು ಪರೀಕ್ಷೆಗಳನ್ನು ನಡೆಸಲಾಗುತ್ತಿದ್ದು, ನಾಳೆ ಹೃದಯ ಶಸ್ತ್ರಚಿಕಿತ್ಸೆ ನಡೆಸಲಾಗುತ್ತದೆ ಎಂದು ತಿಳಿದು ಬಂದಿದೆ.
ಅಮೆರಿಕದ ಪರಿಣಿತ ವೈದ್ಯರು ಕುಮಾರಸ್ವಾಮಿಯವರಿಗೆ ಶಸ್ತ್ರಚಿಕಿತ್ಸೆ ನಡೆಸಲಿದ್ದು, ಶಸ್ತ್ರಚಿಕಿತ್ಸೆ ಬಳಿಕ 2-3 ದಿನ ವಿಶ್ರಾಂತಿ ಪಡೆಯುವ ಕುಮಾರಸ್ವಾಮಿ ಮಾ.25 ರಂದು ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ.ಹೃದಯ ಸಂಬಂಧಿ ಸಮಸ್ಯೆ ನನಗೆ ಹುಟ್ಟಿದ್ದಾಗಿನಿಂದಲೂ ಇದೆ. ಈ ಹಿನ್ನೆಲೆಯಲ್ಲಿ ಎರಡೂ ಬಾರಿ ಟಿಶ್ಯೂ ವಾಲ್ವ್ ಹಾಕಿ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಎರಡು ರೀತಿಯಲ್ಲಿ ಶಸ್ತ್ರಚಿಕಿತ್ಸಮಾಡಲಾಗುತ್ತದೆ ಎಂದು ಹೆಚ್ಡಿಕೆ ಹೇಳಿದ್ದಾರೆ. ಆಸ್ಪತ್ರೆಯಿಂದ ಬಂದ ಕೂಡಲೇ ನಾನು ಮಂಡ್ಯದಿಂದ ಸ್ಪರ್ಧೆ ಮಾಡುತ್ತೇನೆಯೋ ಇಲ್ಲವೋ ಎಂಬುದನ್ನು ತಿಳಿಸುತ್ತೇನೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.