ಮಹಾರಾಷ್ಟ್ರದ ಪರ್ಭಾನಿ ಜಿಲ್ಲೆಯಲ್ಲಿ ಬುಧವಾರ ಬೆಳಿಗ್ಗೆ ರಾಜ್ಯ ಸಾರಿಗೆ ಬಸ್ ಸೇತುವೆಯಿಂದ ಬಿದ್ದು ಸುಮಾರು 30 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ವಾಹನವು ಪರ್ಭಾನಿಯ ಜಿಂಟೂರ್ ನಿಂದ ಸೋಲಾಪುರಕ್ಕೆ ಹೋಗುತ್ತಿತ್ತು.ಮುಂಬೈನಿಂದ ಸುಮಾರು 500 ಕಿ.ಮೀ ದೂರದಲ್ಲಿರುವ ಪರ್ಭಾನಿಯ ಜಿಂಟೂರ್ ತಾಲ್ಲೂಕಿನ ಅಕೋಲಿಯಲ್ಲಿ ಬಸ್ ಚಾಲಕ ನಿಯಂತ್ರಣ ಕಳೆದುಕೊಂಡ ನಂತರ ವಾಹನವು ಸೇತುವೆಯಿಂದ ಬಿದ್ದಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಗಾಯಗೊಂಡವರನ್ನು ಆರಂಭದಲ್ಲಿ ಜಿಂಟೂರಿನ ವೈದ್ಯಕೀಯ ಸೌಲಭ್ಯಕ್ಕೆ ಕರೆದೊಯ್ಯಲಾಯಿತು ಮತ್ತು ನಂತರ ಪರ್ಭಾನಿ ನಗರದ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.
ಸುಮಾರು 30 ಪ್ರಯಾಣಿಕರು ಗಾಯಗೊಂಡಿದ್ದಾರೆ. ಅವರೆಲ್ಲರೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪರ್ಭಾನಿಯ ಪೊಲೀಸ್ ವರಿಷ್ಠಾಧಿಕಾರಿ ರವೀಂದ್ರಸಿಂಗ್ ಪರದೇಶಿ ತಿಳಿಸಿದ್ದಾರೆ.