HomeInternationalBIG NEWS : ಚೀನಾದಲ್ಲಿ ಭೀಕರ ಬಸ್ ಅಪಘಾತ, 14 ಜನ ಸಾವು, 37 ಮಂದಿಗೆ...

BIG NEWS : ಚೀನಾದಲ್ಲಿ ಭೀಕರ ಬಸ್ ಅಪಘಾತ, 14 ಜನ ಸಾವು, 37 ಮಂದಿಗೆ ಗಾಯ

ಚೀನಾದಲ್ಲಿ ಭೀಕರ ಬಸ್ ಅಪಘಾತ ಸಂಭವಿಸಿದೆ. ಉತ್ತರ ಚೀನಾದ ಶಾಂಕ್ಸಿ ಪ್ರಾಂತ್ಯದಲ್ಲಿ ಮಂಗಳವಾರ ಪ್ರಯಾಣಿಕರ ಬಸ್ ಸುರಂಗ ಗೋಡೆಗೆ ಡಿಕ್ಕಿ ಹೊಡೆದಿದೆ.

ಅಪಘಾತದಲ್ಲಿ ಕನಿಷ್ಠ 14 ಜನರು ಸಾವನ್ನಪ್ಪಿದ್ದಾರೆ. ಇನ್ನೂ 37 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಘಟನೆಯ ಬಗ್ಗೆ ಚೀನಾದ ಸರ್ಕಾರಿ ಮಾಧ್ಯಮ ಬುಧವಾರ ವರದಿ ಮಾಡಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮತ್ತೊಂದು ಘಟನೆಯಲ್ಲಿ. ಪೂರ್ವ ಚೀನಾದ ಝೆಜಿಯಾಂಗ್ ಪ್ರಾಂತ್ಯದ ತೈಝೌನ ವೃತ್ತಿಪರ ಶಾಲೆಯಲ್ಲಿ ಮಂಗಳವಾರ ಕಾರು ಜನಸಮೂಹಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದು, 16 ಮಂದಿ ಗಾಯಗೊಂಡಿದ್ದಾರೆ. ತೈಝೌ ವೊಕೇಶನಲ್ ಅಂಡ್ ಟೆಕ್ನಿಕಲ್ ಕಾಲೇಜಿನಲ್ಲಿ ಬೆಳಗ್ಗೆ 11.20ಕ್ಕೆ ಈ ಘಟನೆ ನಡೆದಿದೆ. ಗಾಯಗೊಂಡವರ ಸ್ಥಿತಿ ಸ್ಥಿರವಾಗಿದೆ ಎಂದು ವರದಿ ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular