ಶಿವಮೊಗ್ಗ : ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದು ಖಚಿತ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ.
ತಮ್ಮ ನಿವಾಸದಲ್ಲಿ ನಡೆದ ಸಭೆ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಕೆ.ಎಸ್ ಈಶ್ವರಪ್ಪ ಯಾವುದೇ ಕಾರಣಕ್ಕೂ ನಾನು ಹಿಂದೆ ಸರಿಯುವ ಮಾತಿಲ್ಲ. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದು ಖಚಿತ, ನಾನು ಗೆದ್ದ ನಂತರ ವಿಜಯೇಂದ್ರ ತಮ್ಮ ರಾಜ್ಯಾಧ್ಯಕ್ಷರ ಹುದ್ದೆಗೆ ರಾಜೀನಾಮೆ ಕೊಡುವುದು ನಿಶ್ಚಿತ ಎಂದು ಭವಿಷ್ಯ ನುಡಿದಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ನಾನು ಗೆಲ್ಲುತ್ತೇನೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ತಮ್ಮ ಹುದ್ದೆಗೆ ರಾಜೀನಾಮೆ ಕೊಡ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ. ನನಗೆ ಯಾವುದೇ ಸ್ಥಾನಮಾನ ಬೇಡ, ನನಗೆ ಪಕ್ಷ ಉಳಿಯಬೇಕು ಅಷ್ಟೇ ಎಂದರು.