alex Certify ಶಿವಮೊಗ್ಗ : ಜಿಲ್ಲೆಯ ಈ ಪ್ರದೇಶಗಳಲ್ಲಿ ಮಾ.21, 23 ರಂದು ವಿದ್ಯುತ್ ವ್ಯತ್ಯಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿವಮೊಗ್ಗ : ಜಿಲ್ಲೆಯ ಈ ಪ್ರದೇಶಗಳಲ್ಲಿ ಮಾ.21, 23 ರಂದು ವಿದ್ಯುತ್ ವ್ಯತ್ಯಯ

ಶಿವಮೊಗ್ಗ : ನಗರದ ಗಾಂಧಿಬಜಾರ್, ಭರಮಪ್ಪ ನಗರ, ಎಂಕೆಕೆ ರಸ್ತೆಗಳಲ್ಲಿ ಕಂಬಗಳನ್ನು ಬದಲಿಸುವ ಕಾಮಗಾರಿಯನ್ನು ಮಾ.21 ರಂದು ಹಮ್ಮಿಕೊಂಡಿದ್ದು ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ಗಾಂಧಿಬಜಾರ್, ಸೊಪ್ಪಿನ ಮಾರ್ಕೆಟ್, ಕೆ.ಆರ್.ಪುರಂ, ಭರಮಪ್ಪ ನಗರ, ಎಂಕೆಕೆ ರಸ್ತೆ, ಬಿ.ಹೆಚ್.ರಸ್ತೆ, ನಾಗಪ್ಪ ಕೇರಿ, ತಿರುಪಳಯ್ಯನ ಕೇರಿ, ಸಾವರ್ಕರ್ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಹಾಗೂ ಗಾಜನೂರು ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವುದರಿಂದ ಮಾ. 23 ರಂದು ಬೆಳಗ್ಗೆ 09.00 ರಿಂದ ಸಂಜೆ 06-00ರವರೆಗೆ ಗಾಜನೂರು, ಕ್ಯಾಂಪ್ ಮತ್ತು ಡ್ಯಾಮ್, ಸಕ್ಕರೆಬೈಲು, ನವೋದಯ ಶಾಲೆ, ಶಿವಮೊಗ್ಗ ಕುಡಿಯುವ ನೀರಿನ ಸ್ಥಾವರ, ಹಾಲಲಕ್ಕವಳ್ಳಿ, ಕಡೆಕಲ್, ಯರಗನಾಳ್, ಕುಸ್ಕೂರು, ಶ್ರೀಕಂಠಪುರ, ವೀರಾಪುರ, ತಟ್ಟಿಕೆರೆ, ಹೊಸಕೊಪ್ಪ, ಇಂದಿರಾನಗರ, ಹೊಸಹಳ್ಳಿ, ಮುಳ್ಕೆರೆ, ಆನೆಬಿಡಾರ, ತಿಮ್ಮಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...