ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಗೀತಾ ಶಿವರಾಜ್ ಕುಮಾರ್ ಇಂದು ಶಿವಮೊಗ್ಗದಲ್ಲಿ ಶಿವರಾಜ್ ಕುಮಾರ್ ಅವರೊಂದಿಗೆ ಭರ್ಜರಿ ಪ್ರಚಾರ ನಡೆಸಿದ್ದಾರೆ.
ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ ದೊರೆತಿದೆ. ನಗರದ ಲಗನ ಕಲ್ಯಾಣ ಮಂದಿರದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಮಧು ಬಂಗಾರಪ್ಪ, ಗೀತಕ್ಕ ಅವರನ್ನು ನಿಮ್ಮ ಮಡಿಲಿಗೆ ಹಾಕಿದ್ದೇವೆ. ಜಿಲ್ಲೆಯ ಜನರ ಧ್ವನಿಯಾಗಿ ಅವರು ಕೆಲಸ ಮಾಡಲಿದ್ದಾರೆ ಎಂದು ಹೇಳಿದ್ದಾರೆ.
ತಂದೆಯ ಭ್ರಷ್ಟಾಚಾರದ ಹಣದಿಂದ ರಾಘವೇಂದ್ರ ಸಂಸದರಾಗಿದ್ದಾರೆ. ನಮ್ಮ ತಂದೆ ಇಂತಹ ಯಾವುದೇ ದುಡ್ಡು ಮಾಡಿಲ್ಲ. ಚೋಟಾ ಸಹಿ ಮೂಲಕ ನಾನು ಯಾರನ್ನು ಜೈಲಿಗೆ ಕಳುಹಿಸಿಲ್ಲ ಎಂದು ಪರೋಕ್ಷವಾಗಿ ಯಡಿಯೂರಪ್ಪ ಅವರನ್ನು ಮಕ್ಕಳೇ ಜೈಲಿಗೆ ಕಳುಹಿಸಿದ್ದಾರೆ ಎಂದು ಹೇಳಿದ್ದಾರೆ.
ಬಂಗಾರಪ್ಪ ಅವರ ಧ್ವನಿಯಾಗಿ ಗೀತಾ ಶಿವರಾಜ್ ಕುಮಾರ್ ಕೆಲಸ ಮಾಡುವ ವಿಶ್ವಾಸವಿದೆ. ಅವರು ಸಂಸದರಾಗಿ ನಿಮ್ಮ ಸೇವೆ ಮಾಡಲು ಆಶೀರ್ವದಿಸಿ. ಬಂಗಾರಪ್ಪ ಸೋಲಿನ ಸೇಡು ತೀರಿಸಿಕೊಳ್ಳಬೇಕಿದೆ ಎಂದು ಹೇಳಿದ್ದಾರೆ.