HomeEntertainmentಶೂಟಿಂಗ್ ಕಂಪ್ಲೀಟ್ ಮಾಡಿದ 'ಕೃಷ್ಣಂ ಪ್ರಣಯ ಸಖಿ' ಚಿತ್ರತಂಡ

ಶೂಟಿಂಗ್ ಕಂಪ್ಲೀಟ್ ಮಾಡಿದ ‘ಕೃಷ್ಣಂ ಪ್ರಣಯ ಸಖಿ’ ಚಿತ್ರತಂಡ

Krishnam Pranaya Sakhi

ಶ್ರೀನಿವಾಸ್ ರಾಜು ನಿರ್ದೇಶನದ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ‘ಕೃಷ್ಣಂ ಪ್ರಣಯ ಸಖಿ’ ಚಿತ್ರ ತನ್ನ ಟೈಟಲ್ ಮೂಲಕವೇ ಸಾಕಷ್ಟು ನಿರೀಕ್ಷೆ ಮೂಡಿಸಿದ್ದು, ಇನ್ನೇನು ಶೀಘ್ರದಲ್ಲೇ ತೆರೆ ಮೇಲೆ ಬರಲು ಸಜ್ಜಾಗಿದೆ. ಚಿತ್ರತಂಡ ವಿಯೆಟ್ನಾಂನಲ್ಲಿ ಶೂಟಿಂಗ್ ಕಂಪ್ಲೀಟ್ ಮಾಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದೆ.

ಫ್ಯಾಮಿಲಿ ಎಂಟರ್ಟೈನರ್ ಕಥಾಧಾರಿತ ಈ ಚಿತ್ರದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ಅವರಿಗೆ ಜೋಡಿಯಾಗಿ ಮಾಳವಿಕಾ ನಾಯರ್ ಅಭಿನಯಿಸಿದ್ದಾರೆ. ಸಾಧು ಕೋಕಿಲ, ರಂಗಾಯಣ ರಘು, ಶ್ರೀನಿವಾಸ್ ಮೂರ್ತಿ, ರಾಮಕೃಷ್ಣ, ಶಶಿಕುಮಾರ್, ಶೃತಿ, ಅಶೋಕ್, ಭಾವನ, ಮಾನಸಿ ಸುಧೀರ್, ಮತ್ತು ರಘುರಾಮ್ ಉಳಿದ ಪಾತ್ರವರ್ಗದಲ್ಲಿದ್ದಾರೆ. ತ್ರಿಶೂಲ್ ಎಂಟರ್ಟೈನ್ಮೆಂಟ್ ಬ್ಯಾನರ್ ನಲ್ಲಿ ಪ್ರಶಾಂತ್ ಜಿ ರುದ್ರಪ್ಪ ನಿರ್ಮಾಣ ಮಾಡಿದ್ದಾರೆ. ಅರ್ಜುನ್ ಜನ್ಯ ಸಂಗೀತ ಸಂಯೋಜನೆ ನೀಡಿದ್ದು ಕೆ ಎಂ ಪ್ರಕಾಶ್ ಸಂಕಲನ ವೆಂಕಟ್ ಪ್ರಸಾದ್ ಛಾಯಾಗ್ರಹಣವಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular