ಬೆಂಗಳೂರು: ಹಿಂದುಳಿದ ವರ್ಗಗಳ ಆಯೋಗದ ಜಾತಿ ಗಣತಿ ಪ್ರಶ್ನಿಸಿ ಸಮಾಜ ಸಂಪರ್ಕ ವೇದಿಕೆ ಸಲ್ಲಿಸಿದ ಪಿಐಎಲ್ ಬಗ್ಗೆ ಹೈಕೋರ್ಟ್ ನಲ್ಲಿ ವಿಚಾರಣೆ ನಡೆಸಲಾಗಿದೆ.
ರಾಜ್ಯ ಸರ್ಕಾರದ ಎಜಿ ಶಶಿಕಿರಣ್ ಶೆಟ್ಟಿ ಅವರು, ಹಿಂದುಳಿದ ವರ್ಗಗಳ ಆಯೋಗ ವರದಿ ಸಲ್ಲಿಸಿದೆ. ಸಚಿವ ಸಂಪುಟ ಸಭೆಯಲ್ಲಿ ವರದಿ ಬಗ್ಗೆ ಚರ್ಚಿಸಬೇಕಿದೆ. ಚುನಾವಣೆ ನೀತಿ ಸಂಹಿತೆತಿ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಜೂನ್ 6ರವರೆಗೆ ವರದಿ ಆಧರಿಸಿ ಕ್ರಮ ಕೈಗೊಳ್ಳಲಾಗುವುದಿಲ್ಲ ಎಂದು ತಿಳಿಸಿದ್ದಾರೆ. ವಿಚಾರಣೆಯನ್ನು ಜೂನ್ 5ಕ್ಕೆ ಹೈಕೋರ್ಟ್ ಮುಂದೂಡಿದೆ.
ರಾಜ್ಯ ಸರ್ಕಾರ ಲಿಂಗಾಯತ ಮತ್ತು ಒಕ್ಕಲಿಗ ಸಮುದಾಯಗಳ ತೀವ್ರ ವಿರೋಧದ ನಡುವೆ ಜಾತಿಗಣತಿ ವರದಿ ಸ್ವೀಕರಿಸಿತ್ತು. ಸಾಮಾಜಿಕ ಮತ್ತು ಶೈಕ್ಷಣಿಕ ಅಧ್ಯಯನ ವರದಿ ಎಂದು ಹೇಳಿದ್ದರೂ ಪ್ರಶ್ನಾವಳಿಯಲ್ಲಿ ಜಾತಿ ಬಗ್ಗೆ ಪ್ರಶ್ನೆ ಇದ್ದುದರಿಂದ ಇದು ಜಾತಿ ಗಣತಿ ಆಗಿದೆ. ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದರು.