HomeKarnatakaBREAKING : ರಾಜ್ಯದ 5, 8, 9,11 ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್...

BREAKING : ರಾಜ್ಯದ 5, 8, 9,11 ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ಅಸ್ತು

ಬೆಂಗಳೂರು : ರಾಜ್ಯದ 5, 8, 9, 11ನೇ ತರಗತಿ ಬೋರ್ಡ್ ಪರೀಕ್ಷೆ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು ಪ್ರಕಟಿಸಿದೆ.   ರಾಜ್ಯದ 5, 8, 9,11 ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ಅಸ್ತು ಎಂದಿದೆ.ಸ್ಥಗಿತಗೊಂಡಿದ್ದ ಪರೀಕ್ಷೆ ಮುಂದುವರೆಸಲು ಹೈಕೋರ್ಟ್ ಆದೇಶ ಹೊರಡಿಸಿದೆ

ನ್ಯಾಯಮೂರ್ತಿ ಕೆ.ಸೋಮಶೇಖರ್ ಹಾಗೂ ನ್ಯಾಯಮೂರ್ತಿ ಕೆ.ರಾಜೇಶ್ ರೈ ಅವರಿದ್ದ ವಿಭಾಗೀಯ ಪೀಠ ಬೋರ್ಡ್ ಪರೀಕ್ಷೆಗೆ ಅನುಮತಿ ನೀಡಿ ಆದೇಶ ಹೊರಡಿಸಿದೆ. ಹಾಗೂ, ಮುಂದಿನ ಶೈಕ್ಷಣಿಕ ವರ್ಷದ ಪರೀಕ್ಷೆಯ ವೇಳೆ ಸಂಬಂಧಪಟ್ಟವರೊಂದಿಗೆ ಸಮಾಲೋಚಿಸುವಂತೆ ಶಿಕ್ಷಣ ಇಲಾಖೆಗೆ ಸೂಚಿಸಿದೆ.

ರಾಜ್ಯದ 5, 8, 9, 11ನೇ ತರಗತಿ ಬೋರ್ಡ್ ಪರೀಕ್ಷೆ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರದ ಮೇಲ್ಮನವಿ ಸಂಬಂಧ ಹೈಕೋರ್ಟ್ ವಿಚಾರಣೆ ನಡೆಸಿ ತೀರ್ಪು ಕಾಯ್ದಿರಿಸಿತ್ತು.  ಏಕ ಸದಸ್ಯ ಪೀಠದ ಆದೇಶಕ್ಕೆ ವಿಭಾಗೀಯ ಪೀಠ ನಡೆ ನೀಡಿತ್ತು. ವಿಭಾಗೀಯ ಪೀಠದ ಆದೇಶಕ್ಕೆ ಸುಪ್ರೀಂಕೋರ್ಟ್ ನಿಂದ ತಡೆಯಾಜ್ಞೆ ನೀಡಲಾಗಿತ್ತು. ಮೇಲ್ಮನವಿ ವಿಚಾರಣೆ ಪೂರ್ಣಗೊಳಿಸಲು ಸುಪ್ರೀಂಕೋರ್ಟ್ ಸೂಚನೆ ನೀಡಿತ್ತು. ವಾದ ಪ್ರತಿವಾದ ಆಲಿಸಿದ ವಿಭಾಗೀಯ ಪೀಠ ತೀರ್ಪು ಕಾಯ್ದಿರಿಸಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ, ಅನುದಾನರಹಿತ ಶಾಲೆಗಳ 5, 8 ಮತ್ತು 9ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಡೆಸುವ ವಿಚಾರ ಕುರಿತಂತೆ ಅನಿಶ್ಚಿತತೆ ಮುಂದುವರೆದಿತ್ತು. ಪರೀಕ್ಷೆ ರದ್ದಾಗುತ್ತದೆಯೇ ಅಥವಾ ನಡೆಯುತ್ತದೆಯೇ ಎಂಬುದರ ಕುರಿತಾಗಿ ಗೊಂದಲ ಮುಂದುವರೆದಿದ್ದು, ಮಕ್ಕಳು ಮತ್ತು ಪೋಷಕರ ಸ್ಥಿತಿ ಅಯೋಮಯವಾಗಿತ್ತು.ಇದೀಗ ಹೈಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದೆ.

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular