ನವದೆಹಲಿ: ಬಿಹಾರದಲ್ಲಿ ಶುಕ್ರವಾರ (ಮಾರ್ಚ್ 22) ಬೆಳಿಗ್ಗೆ ನಿರ್ಮಾಣ ಹಂತದಲ್ಲಿದ್ದ ಸೇತುವೆಯ ಒಂದು ಭಾಗ ಕುಸಿದ ಪರಿಣಾಮ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.
ಬಿಹಾರದ ಸುಪಾಲ್ನಲ್ಲಿ ಭೇಜಾ-ಬಕೌರ್ ನಡುವಿನ ಮಾರಿಚಾ ಬಳಿ ಈ ಅಪಘಾತ ಸಂಭವಿಸಿದೆ ಎಂದು ಸುಪಾಲ್ನ ಜಿಲ್ಲಾ ಮ್ಯಾಜಿಸ್ಟ್ರೇಟ್ (ಡಿಎಂ) ಕೌಶಲ್ ಕುಮಾರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಹಲವಾರು ಕಾರ್ಮಿಕರು ಅವಶೇಷಗಳ ಅಡಿಯಲ್ಲಿ ಸಿಲುಕಿದ್ದಾರೆ ಮತ್ತು ರಕ್ಷಣಾ ಕಾರ್ಯ ನಡೆಯುತ್ತಿದೆ ಎಂದು ವರದಿ ತಿಳಿಸಿದೆ.
#WATCH | Supaul, Bihar: A part of an under-construction bridge collapsed near Maricha between Bheja-Bakaur. pic.twitter.com/NNVR5aQ5IZ
— ANI (@ANI) March 22, 2024

