ನವದೆಹಲಿ: ಮುಖ್ಯಮಂತ್ರಿ ಸ್ಥಾನದಿಂದ ಅರವಿಂದ್ ಕೇಜ್ರಿವಾಲ್ ಅವರನ್ನು ವಜಾಗೊಳಿಸುವಂತೆ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.
ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ. ಸುರ್ಜಿತ್ ಸಿಂಗ್ ಯಾದವ್ ಎಂಬುವರು ದೆಹಲಿಯ ರೂಸ್ ಅವೆನ್ಯೂ ಕೋರ್ಟ್ ನಲ್ಲಿ ಪಿಐಎಲ್ ಸಲ್ಲಿಸಿದ್ದಾರೆ. ಹಣಕಾಸು ಅವ್ಯವಹಾರ ಆರೋಪ ಹೊಂದಿರುವ ಕೇಜ್ರಿವಾಲ್ ಅವರನ್ನು ಮುಖ್ಯಮಂತ್ರಿಯಂತಹ ಸಾರ್ವಜನಿಕ ಹುದ್ದೆಯಲ್ಲಿ ಮುಂದುವರೆಸಲು ಬಿಡಬಾರದು. ಅವರು ಹುದ್ದೆಯಲ್ಲಿ ಮುಂದುವರೆಯುವುದರಿಂದ ಕಾನೂನು ಪ್ರಕ್ರಿಯೆಗೆ ಅಡ್ಡಿಯಾಗುತ್ತದೆ. ಸಾಂವಿಧಾನಿಕ ಯಂತ್ರಗಳ ಸ್ಥಗಿತಕ್ಕೆ ಕಾರಣವಾಗಬಹುದು. ಬಂಧಿತರಾಗಿ ಜೈಲು ಸೇರಿರುವ ಕೇಜ್ರಿವಾಲ್ ಅವರನ್ನು ಸಿಎಂ ಸ್ಥಾನದಿಂದ ವಜಾಗೊಳಿಸಬೇಕು ಎಂದು ಪಿಐಎಲ್ ಸಲ್ಲಿಸಲಾಗಿದೆ.