HomeKarnatakaನಿಖಿಲ್ ಕುಮಾರಸ್ವಾಮಿಗೆ ಜೆಡಿಎಸ್ ಕಾರ್ಯಕರ್ತರ ಮುತ್ತಿಗೆ: ಮಂಡ್ಯದಿಂದ ಸ್ಪರ್ಧೆಗೆ ಹೆಚ್ಚಿದ ಒತ್ತಡ

ನಿಖಿಲ್ ಕುಮಾರಸ್ವಾಮಿಗೆ ಜೆಡಿಎಸ್ ಕಾರ್ಯಕರ್ತರ ಮುತ್ತಿಗೆ: ಮಂಡ್ಯದಿಂದ ಸ್ಪರ್ಧೆಗೆ ಹೆಚ್ಚಿದ ಒತ್ತಡ

ರಾಮನಗರ: ಮಂಡ್ಯ ಲೋಕಸಭಾ ಕ್ಷೇತ್ರದಿಂದ ನಿಖಿಲ್ ಕುಮಾರಸ್ವಾಮಿ ಅವರೇ ಸ್ಪರ್ಧಿಸಬೇಕೆಂದು ಒತ್ತಾಯಿಸಿ ಚನ್ನಪಟ್ಟಣದಲ್ಲಿ ಪಕ್ಷದ ಕಾರ್ಯಕರ್ತರು ಮುತ್ತಿಗೆ ಹಾಕಿ ಒತ್ತಾಯಿಸಿದ್ದಾರೆ.

ಚನ್ನಪಟ್ಟಣದ ರೆಸಾರ್ಟ್ ನಲ್ಲಿ ನಡೆಯುತ್ತಿದ್ದ ಜೆಡಿಎಸ್ ಸಭೆಗೆ ಆಗಮಿಸಿದ ಕಾರ್ಯಕರ್ತರು ಸಭೆಯ ಮಧ್ಯೆ ನಿಖಿಲ್ ಕುಮಾರಸ್ವಾಮಿಗೆ ಮುತ್ತಿಗೆ ಹಾಕಿ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸುವಂತೆ ಒತ್ತಡ ಹೇರಿದ್ದಾರೆ.

ಮಂಡ್ಯ ಕ್ಷೇತ್ರದಲ್ಲಿ ಹೆಚ್.ಡಿ. ಕುಮಾರಸ್ವಾಮಿ ಸ್ಪರ್ಧಿಸುವ ಸಾಧ್ಯತೆ ಇದ್ದು, ಚನ್ನಪಟ್ಟಣ ಕ್ಷೇತ್ರವನ್ನು ಬಿಟ್ಟು ಕುಮಾರಸ್ವಾಮಿ ಹೋಗಬಾರದು. ಮಂಡ್ಯ ಕ್ಷೇತ್ರದಿಂದ ಹೆಚ್.ಡಿ. ಕುಮಾರಸ್ವಾಮಿ ಸ್ಪರ್ಧೆ ಮಾಡಲು ಬಿಡುವುದಿಲ್ಲ. ಮಂಡ್ಯ ಕ್ಷೇತ್ರದಲ್ಲಿ ನೀವೇ ಸ್ಪರ್ಧಿಸಿ. ನಾವು ಬಂದು ಪ್ರಚಾರ ಮಾಡುತ್ತೇವೆ. ಆದರೆ, ಮಂಡ್ಯ ಕ್ಷೇತ್ರದಿಂದ ಹೆಚ್.ಡಿ.ಕೆ. ಸ್ಪರ್ಧೆ ಮಾಡಲು ಬಿಡುವುದಿಲ್ಲ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದಕ್ಕೆ ಪ್ರತಿಕ್ರಿಯೆ ನೀಡಿದ ನಿಖಿಲ್ ಕುಮಾರಸ್ವಾಮಿ, ಸ್ಪರ್ಧೆ ಬಗ್ಗೆ ದೇವೇಗೌಡರು, ಪಕ್ಷದ ಹಿರಿಯರು ತೀರ್ಮಾನ ಕೈಗೊಂಡಿಲ್ಲ. ಯಾರೇ ನಿಂತರೂ ಕುಮಾರಸ್ವಾಮಿ ಅಭ್ಯರ್ಥಿ ಎಂದು ಮಂಡ್ಯ ಕ್ಷೇತ್ರದ ಜನ ವಿಶ್ವಾಸ ಇಟ್ಟಿದ್ದಾರೆ. ಎಲ್ಲರ ಜೊತೆ ಚರ್ಚೆ ಮಾಡಿ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷರಾಗಿರುವ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular