ಬಿಸಿಲ ಝಳಕ್ಕೆ ತತ್ತರಿಸಿದ ಜನತೆಗೆ ತಂಪೆರದ ಬೇಸಿಗೆ ಮಳೆ

ಬೆಂಗಳೂರು: ರಾಜ್ಯದ ಹಲವೆಡೆ ಬೇಸಿಗೆ ಮಳೆಯಾಗಿದ್ದು, ಬಿಸಿಲ ಬೇಗೆಯಿಂದ ಬಸವಳಿದಿದ್ದ ಜನರಿಗೆ ತಂಪಿನ ಅನುಭವ ಆಗಿದೆ.

ಮಂಗಳೂರು, ಗದಗ, ಧಾರವಾಡ ಜಿಲ್ಲೆಗಳಲ್ಲಿ ಬೇಸಿಗೆ ಮಳೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ಬೆಳಗಿನ ಜಾವ ಮಳೆಯಾಗಿದೆ. ಮಂಗಳೂರು, ಪುತ್ತೂರು, ಬೆಳ್ತಂಗಡಿ, ಸುಳ್ಯ, ಬಂಟ್ವಾಳ ಭಾಗದಲ್ಲಿ ಭಾರಿ ಮಳೆಯಾಗಿದೆ.

ಹುಬ್ಬಳ್ಳಿ, ಗದಗ, ನವಲಗುಂದದಲ್ಲಿ ಕೂಡ ಕೆಲಕಾಲ ಮಳೆಯಾಗಿದ್ದು, ಬಿಸಿಲಿನ ಝಳಕ್ಕೆ ತತ್ತರಿಸಿದ ಜನತೆಗೆ ತಂಪಿನ ಅನುಭವವಾಗಿದೆ. ಬರಗಾಲದಿಂದ ತತ್ತರಿಸಿದ ಜನತೆಗೆ ಕುಡಿಯುವ ನೀರು, ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗಿದೆ. ತಾಪಮಾನ ಹೆಚ್ಚಳದಿಂದ ಬೇಸಿಗೆ ಬಿಸಿಲ ಝಳದಿಂದ ಜನ ತತ್ತರಿಸಿದ್ದಾರೆ. ಬೆಳೆಗಳ ಉಳಿಸಿಕೊಳ್ಳಲು ರೈತರು ಮಳೆಗಾಗಿ ಎದುರು ನೋಡುತ್ತಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read