HomeBusinessವಿದ್ಯುತ್ ಗ್ರಾಹಕರಿಗೆ ಗುಡ್ ನ್ಯೂಸ್: ಎಸ್ಕಾಂ ಆನ್ಲೈನ್ ಸೇವೆ ಪುನಾರಂಭ: ಬಿಲ್ ವಿಳಂಬಕ್ಕೆ ದಂಡ, ಬಡ್ಡಿ...

ವಿದ್ಯುತ್ ಗ್ರಾಹಕರಿಗೆ ಗುಡ್ ನ್ಯೂಸ್: ಎಸ್ಕಾಂ ಆನ್ಲೈನ್ ಸೇವೆ ಪುನಾರಂಭ: ಬಿಲ್ ವಿಳಂಬಕ್ಕೆ ದಂಡ, ಬಡ್ಡಿ ಇಲ್ಲ

ಬೆಂಗಳೂರು: ಇಂಧನ ಇಲಾಖೆಯ ಸಾಫ್ಟ್ವೇರ್ ಉನ್ನತೀಕರಣ ಪ್ರಕ್ರಿಯೆ ಹಿನ್ನೆಲೆಯಲ್ಲಿ ಸ್ಥಗಿತಗೊಳಿಸಿದ್ದ ವಿದ್ಯುತ್ ಸರಬರಾಜು ಕಂಪನಿಗಳ ಆನ್ಲೈನ್ ಬಿಲ್ ಪಾವತಿ ಸೇರಿ ವಿವಿಧ ಸೇವೆ ಪುನಾರಂಭಗೊಂಡಿವೆ.

ಮಾರ್ಚ್ 30ರ ವೇಳೆಗೆ ಎಲ್ಲಾ ಆನ್ಲೈನ್ ಸೇವೆಗಳು ಯಥಾಸ್ಥಿತಿಗೆ ಬರಲಿವೆ ಎಂದು ಇಂಧನ ಇಲಾಖೆ ಮಾಹಿತಿ ನೀಡಿದೆ. ಸಾಫ್ಟ್ವೇರ್ ಉನ್ನತೀಕರಣ ಸಂದರ್ಭದಲ್ಲಿ ಬಿಲ್ ವಿಳಂಬ ಪಾವತಿಗೆ ದಂಡ, ಬಡ್ಡಿ ವಿಧಿಸುವುದಿಲ್ಲ ಮತ್ತು ಸಂಪರ್ಕ ಕಡಿತಗೊಳಿಸುವುದಿಲ್ಲ ಎಂದು ಹೇಳಲಾಗಿದೆ.

ಮಾರ್ಚ್ 10 ರಿಂದ 19 ರವರೆಗೆ ಉನ್ನತೀಕರಣ ಪ್ರಕ್ರಿಯೆ ನಡೆದ ಸಂದರ್ಭದಲ್ಲಿ ಆನ್ಲೈನ್ ಪಾವತಿ ವ್ಯವಸ್ಥೆ ಹಾಗೂ ಇಲಾಖೆಯ ವಿವಿಧ ಸೇವೆಗಳು ಸಂಪೂರ್ಣ ಸ್ಥಗಿತಗೊಂಡಿದ್ದ ಕಾರಣ ಗ್ರಾಹಕರು ಭಾರಿ ಸಂಖ್ಯೆಯಲ್ಲಿ ಎಸ್ಕಾಂ ಕೌಂಟರ್ ಗಳಿಗೆ ದೌಡಾಯಿಸಿದ್ದರು. ಇದರಿಂದಾಗಿ ಸರ್ವರ್ ಸಮಸ್ಯೆ ಎದುರಾಗಿತ್ತು. ಈಗ ಎಲ್ಲಾ ಸಮಸ್ಯೆ ಸರಿಪಡಿಸಿದ್ದು, ಕೆಲವೇ ದಿನಗಳಲ್ಲಿ ಎಲ್ಲವೂ ಸಹಜ ಸ್ಥಿತಿಗೆ ಮರಳಲಿದೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular