HomeIndiaತಮಿಳುನಾಡಿನಲ್ಲಿ ನಟಿ ರಾಧಿಕಾಗೆ ಬಿಜೆಪಿ ಟಿಕೆಟ್

ತಮಿಳುನಾಡಿನಲ್ಲಿ ನಟಿ ರಾಧಿಕಾಗೆ ಬಿಜೆಪಿ ಟಿಕೆಟ್

ಚೆನ್ನೈ: ತಮಿಳುನಾಡಿನ 15 ಲೋಕಸಭಾ ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ ಹೆಸರು ಪ್ರಕಟಿಸಲಾಗಿದೆ. ನಟಿ ರಾಧಿಕಾ ಶರತ್ ಕುಮಾರ್ ಅವರಿಗೆ ವಿರುಧುನಗರದಿಂದ ಟಿಕೆಟ್ ನೀಡಲಾಗಿದೆ.

ಇತ್ತೀಚಿಗೆ ನಟ ಶರತ್ ಕುಮಾರ್ ಅವರು ಆಲ್ ಇಂಡಿಯಾ ಸಮಥುವ ಮಕ್ಕಳ್ ಕಚ್ಚಿ ಪಕ್ಷ(AISMK)ವನ್ನು ಬಿಜೆಪಿಯೊಂದಿಗೆ ವಿಲೀನಗೊಳಿಸಿದ್ದರು. ಗುರುವಾರ ತಮಿಳುನಾಡಿನ 9 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದ ಬಿಜೆಪಿ ಶುಕ್ರವಾರ ಮತ್ತೆ 15 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಪ್ರಕಟಿಸಿದೆ. ಒಟ್ಟು 24 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಲಾಗಿದೆ. ಉಳಿದ 15 ಕ್ಷೇತ್ರಗಳಿಗೆ ಮೈತ್ರಿ ಪಕ್ಷಗಳ ಅಭ್ಯರ್ಥಿಗಳ ಸ್ಪರ್ಧಿಸಲಿದ್ದಾರೆ.

ನಟಿ ರಾಧಿಕಾ ಶರತ್ ಕುಮಾರ್ ಅವರಿಗೆ ವಿರುದುನಗರದಿಂದ ಟಿಕೆಟ್ ಘೋಷಣೆಯಾಗಿದೆ. ರಾಧಿಕಾ ಕನ್ನಡ, ತಮಿಳು ಸೇರಿದಂತೆ ಹಲವು ಭಾಷೆಯ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ವಿರುದುನಗರ ಕ್ಷೇತ್ರದಲ್ಲಿ ರಾಧಿಕಾ ಶರತ್ ಕುಮಾರ್ ಅವರಿಗೆ ನಟ ವಿಜಯಕಾಂತ್ ಅವರ ಮಗ ಷಣ್ಮುಗ ಪಾಂಡ್ಯನ್ ಪ್ರತಿಸ್ಪರ್ಧಿಯಾಗುವ ಸಾಧ್ಯತೆ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular