TMCʼ ನಾಯಕಿ ಮಹುವಾ ಮೊಯಿತ್ರಾ ಮನೆ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ತೃಣಮೂಲ ಕಾಂಗ್ರೆಸ್ ನಾಯಕಿ ಮಹುವಾ ಮೊಯಿತ್ರಾ ಅವರ ಕೋಲ್ಕತ್ತಾ ಮತ್ತು ಇತರ ಸ್ಥಳಗಳಲ್ಲಿನ ಮನೆಗಳು ಸೇರಿದಂತೆ ಅವರಿಗೆ ಸಂಬಂಧಿಸಿದ ಸ್ಥಳಗಳಲ್ಲಿ ಕೇಂದ್ರ ತನಿಖಾ ದಳ (ಸಿಬಿಐ) ಶೋಧ ನಡೆಸುತ್ತಿದೆ.
ಮೊಯಿತ್ರಾ ಅವರು ತಮ್ಮ ಲೋಕಸಭಾ ಸದಸ್ಯತ್ವವನ್ನು ಕಳೆದುಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನ ತನಿಖಾ ಸಂಸ್ಥೆ ಈ ಕ್ರಮ ಕೈಗೊಂಡಿದೆ.