ರಾಜ್ಯದಲ್ಲಿ ಲೋಕಸಭಾ ಚುನಾವಣೆ ಘೋಷಣೆಯಾಗಿದ್ದು, ಇನ್ನೂ ಮತದಾರರ ಪಟ್ಟಿಯಲ್ಲಿಹೆಸರು ಸೇರ್ಪಡೆಗೆ ಕಾಲಾವಕಾಶ ಇದೆ. ಹೊಸದಾಗಿ ಹೆಸರು ಸೇರ್ಪಡೆ ಮಾಡುವವರು ಅಥವಾ ಹೆಸರು ಬಿಟ್ಟು ಹೋಗಿರುವವರು ಒಮ್ಮೆ ಮತದಾರರ ಪಟ್ಟಿಯನ್ನು ಪರಿಶೀಲಿಸಿ ಮತ್ತೆ ಅರ್ಜಿ ಸಲ್ಲಿಸಬಹುದು. ಇದಕ್ಕೆ ಇನ್ನು 2 ದಿನ ಮಾತ್ರ ಕಾಲಾವಕಾಶ.
ಹೌದು, ಮಾ.25 ರೊಳಗೆ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ನೋಂದಣಿ ಮಾಡಿಕೊಳ್ಳಬಹುದು.
ಮತದಾರರ ಪಟ್ಟಿಗೆ ನೋಂದಾಯಿಸಿಕೊಳ್ಳಲು ನಾಗರಿಕರು ಫಾರ್ಮ್ 6 ಅನ್ನು ಭರ್ತಿ ಮಾಡಬೇಕು,
ತಿದ್ದುಪಡಿಗಳನ್ನು ಮಾಡಲು ಬಯಸುವವರು ಫಾರ್ಮ್ 8 ಅನ್ನು ಭರ್ತಿ ಮಾಡಬೇಕು.ಫಾರ್ಮ್ಗಳನ್ನು ಆನ್ಲೈನ್ನಲ್ಲಿ (www.nvsp.in) ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಬಹುದು ಅಥವಾ ಡೌನ್ಲೋಡ್ ಮಾಡಿ ಭೌತಿಕವಾಗಿ ಚುನಾವಣಾ ನೋಂದಣಿ ಅಧಿಕಾರಿ ಅಥವಾ ಬೂತ್ ಮಟ್ಟದ ಅಧಿಕಾರಿಗೆ ಸಲ್ಲಿಸಬಹುದು. ಅವುಗಳನ್ನು ಅಂಚೆ ಮೂಲಕವೂ ಕಳುಹಿಸಬಹುದು. ವಿಳಾಸ ಬದಲಾವಣೆಯ ಸಂದರ್ಭದಲ್ಲಿ, ಅರ್ಜಿದಾರರು ಫಾರ್ಮ್ 8 ಎ ಅನ್ನು ಭರ್ತಿ ಮಾಡಬೇಕಾಗುತ್ತದೆ. ಮತದಾರರ ಪಟ್ಟಿಯಿಂದ ಹೆಸರನ್ನು ಅಳಿಸಲು ಫಾರ್ಮ್ 7 ಅನ್ನು ಭರ್ತಿ ಮಾಡಬೇಕಾಗುತ್ತದೆ. ಮತ ಚಲಾಯಿಸಲು ತೆರಳುವ ಮುನ್ನ, ಪ್ರತಿಯೊಬ್ಬ ನಾಗರಿಕರು ತಮ್ಮ ಮತದಾರರ ಪಟ್ಟಿಯಲ್ಲಿ ತಮ್ಮ ವಿವರಗಳನ್ನು ಪರಿಶೀಲಿಸಬೇಕು.