ಬಳ್ಳಾರಿ : ಲೋಕಸಭೆ ಸಾರ್ವತ್ರಿಕ ಚುನಾವಣೆ ಅಂಗವಾಗಿ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆಯು ಕಟ್ಟುನಿಟ್ಟಾಗಿ ಜಾರಿಯಾಗಿದ್ದು, ಶುಕ್ರವಾರದಂದು ಮಾದರಿ ನೀತಿ ಸಂಹಿತೆ ಉಲ್ಲಂಘಿಸಿ ಅನಧೀಕೃತವಾಗಿ ಸಾಗಿಸುತ್ತಿದ್ದ 629.94 ಲೀಟರ್ (ರೂ.2,53,141 ಮೌಲ್ಯ) ಮದ್ಯ, ರೂ.26 ಲಕ್ಷ ನಗದು ಹಣ ವಶಪಡಿಸಿಕೊಂಡು ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.
ಸಂಡೂರು ತಾಲ್ಲೂಕಿನ ಚೋರನೂರು ಬಳಿ ಅಕ್ರಮವಾಗಿ ಸಾಗಾಣೆ ಮಾಡುತ್ತಿದ್ದ 130 ಗ್ರಾಂ (ರೂ.4500 ಮೌಲ್ಯದ) ಗಾಂಜಾ ಮತ್ತು ಬಳ್ಳಾರಿ ನಗರ ವ್ಯಾಪ್ತಿಯಲ್ಲಿ ರೂ.26 ಲಕ್ಷ ನಗದು ಹಣ, ದ್ವಿಚಕ್ರ ವಾಹನ ವಶಪಡಿಸಿಕೊಳ್ಳಲಾಗಿದೆ.
ಅಬಕಾರಿ ಪೊಲೀಸ್ ಅಧಿಕಾರಿಗಳಿಂದ 500.87 ಲೀಟರ್ (ರೂ.195960 ಮೌಲ್ಯ) ಮದ್ಯ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳಿಂದ 129.07 ಲೀಟರ್ (ರೂ.57181 ಮೌಲ್ಯ) ಮದ್ಯ ಮತ್ತು ಒಂದು ವಾಹನ (ರೂ.50 ಸಾವಿರ ಮೌಲ್ಯ) ವಶಪಡಿಸಿಕೊಳ್ಳಲಾಗಿದೆ. ಈವರೆಗೆ ಒಟ್ಟು 44 ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆದ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.