HomeKarnatakaಮಹಿಳಾ ಸಿಬ್ಬಂದಿ ಬಳಸಿಕೊಂಡು ಅಧಿಕಾರಿಗಳ ಕಿರುಕುಳ: ವಿಷ ಸೇವಿಸಿದ ಚಾಲಕ

ಮಹಿಳಾ ಸಿಬ್ಬಂದಿ ಬಳಸಿಕೊಂಡು ಅಧಿಕಾರಿಗಳ ಕಿರುಕುಳ: ವಿಷ ಸೇವಿಸಿದ ಚಾಲಕ

ಶಿವಮೊಗ್ಗ: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಕರ್ತವ್ಯನಿರತ ಚಾಲಕ ಕಂ ನಿರ್ವಾಹಕ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಬಸವರಾಜ್ ಆತ್ಮಹತ್ಯೆಗೆ ಯತ್ನಿಸಿದವರು. ಶಿವಮೊಗ್ಗ ವಿಭಾಗದ ಹೊನ್ನಾಳಿ ಡಿಪೋದಲ್ಲಿ ಬಸವರಾಜ ಕೆಲಸ ಮಾಡುತ್ತಿದ್ದಾರೆ. ಬಸ್ ನಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಹೊನ್ನಾಳಿ ಘಟಕದಲ್ಲಿ ಕರ್ತವ್ಯ ನಿರತ ಮೆಕಾನಿಕ್ ಕೆ. ರೇಣುಕಾ ಹಾಗೂ ಕೆ.ಎಸ್.ಆರ್.ಟಿ.ಸಿ. ಹಿರಿಯ ಅಧಿಕಾರಿಗಳ ವಿರುದ್ಧ ಕಿರುಕುಳದ ಆರೋಪ ಮಾಡಿದ್ದಾರೆ. ಹೊನ್ನಾಳಿ ಘಟಕದಲ್ಲಿ ಕುಡಿಯುವ ನೀರಿನ ವಿಷಯಕ್ಕೆ ತಗಾದೆ ತೆಗೆದು ಬಸವರಾಜ್ ಜೊತೆ ರೇಣುಕಾ ಕಿರಿಕ್ ಮಾಡುತ್ತಿದ್ದ ಆರೋಪ ಕೇಳಿ ಬಂದಿದೆ. ಮಹಿಳಾ ಸಿಬ್ಬಂದಿ ರೇಣುಕಾರನ್ನು ಮುಂದೆ ಇಟ್ಟುಕೊಂಡು ಕಿರುಕುಳ ನೀಡಲಾಗುತ್ತಿದೆ. ಇದಕ್ಕೆಲ್ಲಾ ಶಿವಮೊಗ್ಗ ವಿಭಾಗದ ಅಧಿಕಾರಿಗಳ ಪ್ರಚೋದನೆ ಇದೆ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಲೈಂಗಿಕ ಕಿರುಕುಳ, ಜಾತಿ ನಿಂದನೆ ಕೇಸ್ ದಾಖಲಿಸಿ ಜೈಲಿಗೆ ಕಳುಹಿಸಲು ಹುನ್ನಾರ ನಡೆಸಿದ್ದಾರೆ. ನನ್ನ ಸಾವಿಗೆ ರೇಣುಕಾ, ಹಿರಿಯ ಅಧಿಕಾರಿಗಳು ಕಾರಣ ಎಂದು ಡೆತ್ ನೋಟ್ ನಲ್ಲಿ ಹೆಸರು ಉಲ್ಲೇಖಿಸಿ ಬಸವರಾಜ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಶಿವಮೊಗ್ಗ ಜಿಲ್ಲಾ ಆಸ್ಪತ್ರೆಯಲ್ಲಿ ಅಸ್ವಸ್ಥ ಬಸವರಾಜ್ ಗೆ ಚಿಕಿತ್ಸೆ ಕೊಡಿಸಲಾಗಿದೆ. ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular