
ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಯಡಿಯೂರಪ್ಪ ಅನ್ನಪೂರ್ಣೇಶ್ವರಿ ದೇವಿಯ ಮೊರೆ ಹೋಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಹೊರನಾಡು ಅನ್ನಪೂರ್ಣೇಶ್ವರಿ ದೇವಾಲಯಕ್ಕೆ ಭೇಟಿ ನೀಡಿದ್ದಾರೆ.
ಇಂದು ರಾತ್ರಿ ಯಡಿಯೂರಪ್ಪ ಕುಟುಂಬ ಹೊರನಾಡಿನಲ್ಲಿ ವಾಸ್ತವ್ಯ ಹೂಡಲಿದೆ. ಯಡಿಯೂರಪ್ಪ ಪುತ್ರರಾದ ವಿಜಯೇಂದ್ರ, ರಾಘವೇಂದ್ರ ಭಾಗಿಯಾಗಲಿದ್ದಾರೆ. ಇಂದು ವಿಶೇಷ ಪೂಜೆ ಸಲ್ಲಿಸಲಿದ್ದು, ನಾಳೆ ಮುಂಜಾನೆ ಅನ್ನಪೂರ್ಣೇಶ್ವರಿ ಸನ್ನಿಧಿಯಲ್ಲಿ ಚಂಡಿಕಾ ಯಾಗ ನಡೆಯಲಿದೆ. ಚುನಾವಣೆ ಹೊಸ್ತಿಲಲ್ಲಿ ಯಡಿಯೂರಪ್ಪ ಕುಟುಂಬದ ಮೇಲೆ ಶತ್ರುತ್ವ ಹೆಚ್ಚಾಗಿದೆ. ಶತ್ರುತ್ವ ನಾಶ, ಲೋಕ ಕಲ್ಯಾಣಾರ್ಥವಾಗಿ ಚಂಡಿಕಾ ಯಾಗ ನೆರವೇರಿಸಲಾಗುವುದು ಎನ್ನಲಾಗಿದೆ.