HomeIndiaಬರುವ ಶೈಕ್ಷಣಿಕ ವರ್ಷದಿಂದಲೇ 3-6ನೇ ತರಗತಿ ಸಿಬಿಎಸ್ಇ ಪಠ್ಯಕ್ರಮ ಬದಲಾವಣೆಗೆ ಆದೇಶ

ಬರುವ ಶೈಕ್ಷಣಿಕ ವರ್ಷದಿಂದಲೇ 3-6ನೇ ತರಗತಿ ಸಿಬಿಎಸ್ಇ ಪಠ್ಯಕ್ರಮ ಬದಲಾವಣೆಗೆ ಆದೇಶ

ನವದೆಹಲಿ: 2024- 25 ನೇ ಸಾಲಿನ 3 ರಿಂದ 6ನೇ ತರಗತಿ ಪಠ್ಯಕ್ರಮ ಬದಲಾವಣೆಗೆ ಸಂಬಂಧಿಸಿದಂತೆ ಬರುವ ಶೈಕ್ಷಣಿಕ ವರ್ಷವೇ ಜಾರಿಗೆ ಆದೇಶ ನೀಡಲಾಗಿದೆ.

ಶೀಘ್ರವೇ ರಾಷ್ಟ್ರೀಯ ಶೈಕ್ಷಣಿಕ ಸಂಶೋಧನಾ ಮತ್ತು ತರಬೇತಿ ಸಂಸ್ಥೆ(NCERT) ಪಠ್ಯ ಬಿಡುಗಡೆ ಮಾಡಲಿದೆ. ಈ ನಾಲ್ಕು ತರಗತಿಗಳನ್ನು ಹೊರತುಪಡಿಸಿ ಮಿಕ್ಕ ಯಾವ ತರಗತಿಗಳ ಪಠ್ಯಕ್ರಮದಲ್ಲಿ ಬದಲಾವಣೆ ಇರುವುದಿಲ್ಲ ಎಂದು ಸಿಬಿಎಸ್ಇ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಪಠ್ಯಕ್ರಮ ಬದಲಾದ ಮೂರರಿಂದ ಆರನೇ ತರಗತಿವರೆಗೆ ಬ್ರಿಜ್ ಕೋರ್ಸ್ ನಡೆಸಲಾಗುವುದು. ಪಠ್ಯಪುಸ್ತಕಗಳ ರವಾನೆ ಶೀಘ್ರವೇ ಆರಂಭವಾಗಲಿದೆ. ಶಿಕ್ಷಕರು ಹೊಸ ಪಠ್ಯ ಬೋಧಿಸಬೇಕು ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನದ ಭಾಗವಾಗಿ ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟು ಅಡಿಯಲ್ಲಿ ಪಠ್ಯಕ್ರಮ ಬದಲಾವಣೆಗೆ ಶಿಕ್ಷಣ ಇಲಾಖೆ ಸೂಚನೆ ನೀಡಿತ್ತು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular