HomeKarnatakaಹಠಕ್ಕೆ ಬಿದ್ದು ಕುಟುಂಬದವರಿಗೆ ಟಿಕೆಟ್ ಪಡೆದ ಸಚಿವರಿಗೆ ಶಾಕ್: ಸೋತರೆ ಮಂತ್ರಿ ಸ್ಥಾನಕ್ಕೆ ಕುತ್ತು...?

ಹಠಕ್ಕೆ ಬಿದ್ದು ಕುಟುಂಬದವರಿಗೆ ಟಿಕೆಟ್ ಪಡೆದ ಸಚಿವರಿಗೆ ಶಾಕ್: ಸೋತರೆ ಮಂತ್ರಿ ಸ್ಥಾನಕ್ಕೆ ಕುತ್ತು…?

ಬೆಂಗಳೂರು: ಹಠಕ್ಕೆ ಬಿದ್ದು ಕುಟುಂಬ ಸದಸ್ಯರಿಗೆ ಲೋಕಸಭೆ ಚುನಾವಣೆಯ ಟಿಕೆಟ್ ಪಡೆದುಕೊಂಡ ಸಚಿವರಿಗೆ ಅವರನ್ನು ಗೆಲ್ಲಿಸಿಕೊಳ್ಳಬೇಕಾದ ಸವಾಲು ಎದುರಾಗಿದೆ.

ಸಚಿವ ರಾಮಲಿಂಗಾರೆಡ್ಡಿ ಪುತ್ರಿ ಸೌಮ್ಯಾ ರೆಡ್ಡಿ ಬೆಂಗಳೂರು ದಕ್ಷಿಣದಿಂದ ಸ್ಪರ್ಧಿಸಿದ್ದಾರೆ. ಚಿಕ್ಕೋಡಿಯಿಂದ ಸಚಿವ ಸತೀಶ್ ಜಾರಕಿಹೊಳಿ ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಕಣಕ್ಕಿಳಿದಿದ್ದಾರೆ. ಬಾಗಲಕೋಟೆಯಿಂದ ಸಚಿವ ಶಿವಾನಂದ ಪಾಟೀಲ್ ಪುತ್ರಿ ಸಂಯುಕ್ತಾ ಪಾಟೀಲ್ ಸ್ಪರ್ಧಿಸಿದ್ದಾರೆ. ಬೀದರ್ ನಿಂದ ಸಚಿವ ಈಶ್ವರ್ ಖಂಡ್ರೆ ಅವರ ಪುತ್ರ ಸಾಗರ್ ಖಂಡ್ರೆ ಸ್ಪರ್ಧಿಸಿದ್ದು, ಬೆಳಗಾವಿ ಕ್ಷೇತ್ರದಿಂದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಕಣಕ್ಕಿಳಿದಿದ್ದಾರೆ.

ದಾವಣಗೆರೆಯಲ್ಲಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರ ಪತ್ನಿ ಪ್ರಭಾ ಮಲ್ಲಿಕಾರ್ಜುನ್ ಗೆ ಕಾಂಗ್ರೆಸ್ ಟಿಕೆಟ್ ನೀಡಲಾಗಿದೆ. ಶಿವಮೊಗ್ಗ ಕ್ಷೇತ್ರದಲ್ಲಿ ಸಚಿವ ಮಧು ಬಂಗಾರಪ್ಪ ಸಹೋದರಿ ಗೀತಾ ಶಿವರಾಜಕುಮಾರ್ ಸ್ಪರ್ಧಿಸಿದ್ದಾರೆ. ಕಲ್ಬುರ್ಗಿಯಲ್ಲಿ ಸಚಿವ ಪ್ರಿಯಾಂಕ್  ಖರ್ಗೆ ಭಾವ ರಾಧಾಕೃಷ್ಣ ದೊಡ್ಡಮನಿ ಸ್ಪರ್ಧಿಸಿದ್ದಾರೆ. ಬೆಂಗಳೂರು ಗ್ರಾಮಾಂತರದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಸಹೋದರ ಡಿ.ಕೆ. ಸುರೇಶ್ ಅಭ್ಯರ್ಥಿಯಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಲೋಕಸಭೆ ಚುನಾವಣೆಯಲ್ಲಿ ಕುಟುಂಬದವರಿಗೆ ಟಿಕೆಟ್ ಪಡೆದುಕೊಂಡ ಸಚಿವರಿಗೆ ಅವರನ್ನು ಗೆಲ್ಲಿಸಲೇಬೇಕಾದ ಜವಾಬ್ದಾರಿ ಇದೆ. ಒಂದು ವೇಳೆ ಲೋಕಸಭೆ ಚುನಾವಣೆಯಲ್ಲಿ ಕುಟುಂಬ ಸದಸ್ಯರು ಪರಾಭವಗೊಂಡಲ್ಲಿ ಸಚಿವರ ಸ್ಥಾನಕ್ಕೆ ಕುತ್ತು ಬಂದರೂ ಬರಬಹುದು ಎಂದು ಕಾಂಗ್ರೆಸ್ ವಲಯದಲ್ಲಿ ಚರ್ಚೆಯಾಗುತ್ತಿದೆ.

ಲೋಕಸಭೆ ಚುನಾವಣೆ ಫಲಿತಾಂಶದ ನಂತರ ರಾಜ್ಯ ಸಚಿವ ಸಂಪುಟದಲ್ಲಿ ಬದಲಾವಣೆಯಾಗುವ ಸಾಧ್ಯತೆ ಇದೆ. ಕಾಂಗ್ರೆಸ್ ಹೈಕಮಾಂಡ್ ಅಳೆದು ತೂಗಿ ಗೆಲುವಿನ ಮಾನದಂಡ ಅನುಸರಿಸಿ ಸಚಿವರ ಕುಟುಂಬದವರಿಗೆ ಮಣೆ ಹಾಕಿದೆ. ವರಿಷ್ಠರು ನೀಡಿದ ಜವಾಬ್ದಾರಿಯನ್ನು ನಿಭಾಯಿಸುವಲ್ಲಿ ವಿಫಲರಾದರೆ ಸಚಿವರ ತಲೆದಂಡ ನಿಶ್ಚಿತ ಎನ್ನಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular