HomeIndiaಮಾ. 31 ರಂದು ದೆಹಲಿಯಲ್ಲಿ ’I.N.D.I.A.’ ಶಕ್ತಿ ಪ್ರದರ್ಶನ: ಕೇಜ್ರಿವಾಲ್ ಬಂಧನ ವಿರೋಧಿಸಿ ಪ್ರತಿಭಟನೆ

ಮಾ. 31 ರಂದು ದೆಹಲಿಯಲ್ಲಿ ’I.N.D.I.A.’ ಶಕ್ತಿ ಪ್ರದರ್ಶನ: ಕೇಜ್ರಿವಾಲ್ ಬಂಧನ ವಿರೋಧಿಸಿ ಪ್ರತಿಭಟನೆ

ನವದೆಹಲಿ: ಲೋಕಸಭೆ ಚುನಾವಣೆಗೆ ವಾರದ ಮೊದಲು ಪ್ರತಿಪಕ್ಷಗಳ ಒಗ್ಗಟ್ಟು ಮತ್ತು ಶಕ್ತಿ ಪ್ರದರ್ಶನದ ಗುರಿಯೊಂದಿಗೆ ಮಾರ್ಚ್ 31 ರಂದು ನವದೆಹಲಿಯ ರಾಮಲೀಲಾ ಮೈದಾನದಲ್ಲಿ ‘ಐಎನ್‌ಡಿಐಎ’ ಬ್ಲಾಕ್ ‘ಮಹಾ ರ್ಯಾಲಿ’ ನಡೆಸಲಿದೆ ಎಂದು ಆಮ್ ಆದ್ಮಿ ಪಕ್ಷದ ನಾಯಕ ಮತ್ತು ದೆಹಲಿ ಸಚಿವ ಗೋಪಾಲ್ ರೈ ಭಾನುವಾರ ಹೇಳಿದ್ದಾರೆ.

ಆಪಾದಿತ ಮದ್ಯದ ಹಗರಣಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿದ ಹಿನ್ನೆಲೆಯಲ್ಲಿ ಸರ್ವಾಧಿಕಾರದ ವಿರುದ್ಧ” ಮಾರ್ಚ್ 31 ರಂದು ಬೆಳಿಗ್ಗೆ 10 ಗಂಟೆಗೆ ರ್ಯಾಲಿ ಹಮ್ಮಿಕೊಂಡಿದ್ದು, ಪಾಲ್ಗೊಳ್ಳುವಂತೆ ರೈ ದೇಶದ ಜನತೆಗೆ ಮನವಿ ಮಾಡಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೇಜ್ರಿವಾಲ್ ಬಂಧನದ ಬಗ್ಗೆ ಬಿಜೆಪಿ ನೇತೃತ್ವದ ಕೇಂದ್ರವನ್ನು ತರಾಟೆಗೆ ತೆಗೆದುಕೊಂಡ ಅವರು ಪ್ರಧಾನಿ ನರೇಂದ್ರ ಮೋದಿ ಅವರು ಕೇಂದ್ರೀಯ ಸಂಸ್ಥೆಗಳನ್ನು “ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ” ಎಂದು ಆರೋಪಿಸಿದರು.

ಕೇವಲ ಅರವಿಂದ್ ಕೇಜ್ರಿವಾಲ್ ಮಾತ್ರವಲ್ಲ, ಪ್ರತಿಪಕ್ಷಗಳನ್ನು ಅಳಿಸಿಹಾಕಲು ಪ್ರಧಾನಿ ಮೋದಿ ಕೇಂದ್ರೀಯ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ. ಒಂದೋ ಶಾಸಕರನ್ನು ಹಣದಿಂದ ಖರೀದಿಸುತ್ತಿದ್ದಾರೆ ಅಥವಾ ಬಿಜೆಪಿ ಸೇರುವಂತೆ ಬೆದರಿಕೆ ಹಾಕುತ್ತಿದ್ದಾರೆ. ಮಾರಾಟವಾಗಲು, ತಲೆಬಾಗಲು ಸಿದ್ಧರಿಲ್ಲದ, ಒಪ್ಪದವರ ವಿರುದ್ಧ ನಕಲಿ ಪ್ರಕರಣ ದಾಖಲಿಸಿ, ದಾಳಿ, ಬಂಧನ, ಬೆದರಿಕೆ ಹಾಕಲಾಗುತ್ತಿದೆ ಎಂದು ಹೇಳಿದ್ದಾರೆ.

ಪ್ರಜಾಪ್ರಭುತ್ವ ಉಳಿಸಲು ಮಹಾ ರ್ಯಾಲಿ: ಅತಿಶಿ

‘ಮಹಾ ರ್ಯಾಲಿ’ ಕೇಜ್ರಿವಾಲ್ ಅವರನ್ನು ಉಳಿಸಲು ಅಲ್ಲ “ಪ್ರಜಾಪ್ರಭುತ್ವವನ್ನು ಉಳಿಸಲು” ಎಂದು ದೆಹಲಿ ಸಚಿವೆ ಅತಿಶಿ ಹೇಳಿದ್ದಾರೆ.

‘ಇಂಡಿಯಾ’ ಮೈತ್ರಿಕೂಟವು ಮಾರ್ಚ್ 31 ರಂದು ರಾಮಲೀಲಾ ಮೈದಾನದಲ್ಲಿ ‘ಮಹಾ ರ್ಯಾಲಿ’ ಆಯೋಜಿಸುತ್ತಿದೆ. ಇದನ್ನು ಅರವಿಂದ್ ಕೇಜ್ರಿವಾಲ್ ಉಳಿಸಲು ಆಯೋಜಿಸಲಾಗುತ್ತಿಲ್ಲ ಬದಲಾಗಿ ಪ್ರಜಾಪ್ರಭುತ್ವವನ್ನು ಉಳಿಸಲು ಆಯೋಜಿಸಲಾಗುತ್ತಿದೆ. ಪ್ರತಿಪಕ್ಷಗಳು ಏಕಪಕ್ಷೀಯ ದಾಳಿಯನ್ನು ಎದುರಿಸುತ್ತಿವೆ ಎಂದು ಅವರು ಹೇಳಿದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular