HomeKarnatakaಬಿಜೆಪಿಗೆ ಕಗ್ಗಂಟಾದ ಚಿತ್ರದುರ್ಗ: ಸತತ 7 ಬಾರಿ ಅಭ್ಯರ್ಥಿಯಾಗಿದ್ದ ಅನಂತ್ ಕುಮಾರ್ ಹೆಗಡೆಗೆ ನಿರಾಸೆ

ಬಿಜೆಪಿಗೆ ಕಗ್ಗಂಟಾದ ಚಿತ್ರದುರ್ಗ: ಸತತ 7 ಬಾರಿ ಅಭ್ಯರ್ಥಿಯಾಗಿದ್ದ ಅನಂತ್ ಕುಮಾರ್ ಹೆಗಡೆಗೆ ನಿರಾಸೆ

ಬೆಂಗಳೂರು: ಲೋಕಸಭೆ ಚುನಾವಣೆಗೆ ರಾಜ್ಯದ 4 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಬಿಜೆಪಿ ಪ್ರಕಟಿಸಿದೆ. ಚಿಕ್ಕಬಳ್ಳಾಪುರದಿಂದ ಡಾ.ಕೆ. ಸುಧಾಕರ್ ಗೆ ಟಿಕೆಟ್ ನೀಡಲಾಗಿದೆ.

ಬೆಳಗಾವಿಯಿಂದ ಜಗದೀಶ್ ಶೆಟ್ಟರ್, ರಾಯಚೂರಿನಿಂದ ರಾಜಾ ಅಮರೇಶ್ವರ ನಾಯಕ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ. ಉತ್ತರ ಕನ್ನಡದಿಂದ ಅನಂತ್ ಕುಮಾರ್ ಹೆಗಡೆಯವರಿಗೆ ಬಿಜೆಪಿ ಟಿಕೆಟ್ ಕೈತಪ್ಪಿದ್ದು, ಕಗ್ಗಂಟಾಗಿರುವ ಚಿತ್ರದುರ್ಗ ಕ್ಷೇತ್ರಕ್ಕೆ ಅಭ್ಯರ್ಥಿಯ ಹೆಸರನ್ನು ಅಂತಿಮಗೊಳಿಸಲಾಗಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೇಂದ್ರ ಸಚಿವ ಎ. ನಾರಾಯಣಸ್ವಾಮಿ ಚಿತ್ರದುರ್ಗ ಕ್ಷೇತ್ರ ಪ್ರತಿನಿಧಿಸುತ್ತಿದ್ದು, ಆಡಳಿತ ವಿರೋಧಿ ಅಲೆಯ ಕಾರಣ ಮಾಜಿ ಡಿಸಿಎಂ ಗೋವಿಂದ ಕಾರಜೋಳ ಅವರನ್ನು ಕಣಕ್ಕಿಳಿಸಲು ಚಿಂತನೆ ನಡೆಸಿದೆ. ವಿವಾದಿತ ಹೇಳಿಕೆ ಮೂಲಕ ಟೀಕೆಗೆ ಗುರಿಯಾಗಿದ್ದ ಅನಂತ್ ಕುಮಾರ್ ಹೆಗಡೆಗೆ ಟಿಕೆಟ್ ಕೈತಪ್ಪಿದೆ. ಸತತ 7 ಬಾರಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಅಭ್ಯರ್ಥಿಯಾಗಿದ್ದ ಅನಂತಕುಮಾರ್ ಹೆಗಡೆಯವರಿಗೆ ಬಿಜೆಪಿ ಟಿಕೆಟ್ ಕೈತಪ್ಪಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular