HomeKarnatakaಪಾರ್ಕಿಂಗ್ ವಿಚಾರಕ್ಕೆ ಗಲಾಟೆ: ಮನೆಗೆ ನುಗ್ಗಿ ಮಹಿಳೆಯರು ಸೇರಿ 8 ಮಂದಿ ಮೇಲೆ ಹಲ್ಲೆ

ಪಾರ್ಕಿಂಗ್ ವಿಚಾರಕ್ಕೆ ಗಲಾಟೆ: ಮನೆಗೆ ನುಗ್ಗಿ ಮಹಿಳೆಯರು ಸೇರಿ 8 ಮಂದಿ ಮೇಲೆ ಹಲ್ಲೆ

ಬೆಂಗಳೂರು: ಆಟೋ ಪಾರ್ಕಿಂಗ್ ವಿಚಾರಕ್ಕೆ ಅಕ್ಕ-ಪಕ್ಕದವರ ಮನೆಯವರ ನಡುವೆ ಗಲಾಟೆ ನಡೆದ ಘಟನೆ ಪ್ರಗತಿಪುರ ಬಡಾವಣೆಯಲ್ಲಿ ನಡೆದಿದೆ.

ಶಿವಕುಮಾರ್ ಕುಟುಂಬದವರು ಸೇರಿ ಎಂಟು ಜನರ ಮೇಲೆ ಸೈಯದ್ ತಾಹ ಮತ್ತು ಆತನ ಕಡೆಯವರು ಮನೆಗೆ ನುಗ್ಗಿ ಮಹಿಳೆಯರು ಸೇರಿ 8 ಜನರ ಮೇಲೆ ಹಲ್ಲೆ ನಡೆಸಿದ್ದಾರೆ. ಸೈಯದ್ ತಾಹ ಸಂಬಂಧಿ ಯುವಕ, ಆತನ ಕಡೆಯವರು ಹಲ್ಲೆ ಮಾಡಿದ್ದಾರೆ.

ನಾಲ್ವರು ಮಹಿಳೆಯರು ಹಾಗೂ ನಾಲ್ವರು ಪುರುಷರ ಮೇಲೆ ಹಲ್ಲೆ ಮಾಡಲಾಗಿದೆ. ಹಲ್ಲೆಗೊಳಗಾದವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಣ್ಣ ರಸ್ತೆಯ ಏರಿಯಾದ ಅಕ್ಕಪಕ್ಕದ ನಿವಾಸಿಗಳಾಗಿರುವ ಶಿವಕುಮಾರ್ ಮತ್ತು ಸೈಯದ್ ನಡುವೆ ಗಲಾಟೆಯಾಗಿದೆ. ತಮ್ಮ ಮನೆಯ ಮುಂದೆ ಶಿವಕುಮಾರ್ ಆಟೋ ನಿಲ್ಲಿಸಿಕೊಂಡಿದ್ದರು. ತಾಹ ಮನೆಯ ಮುಂದೆ ಆತನ ಸಂಬಂಧಿ ಆಟೋ ನಿಲ್ಲಿಸಿದ್ದ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವೇಗವಾಗಿ ಬಂದು ಆಟೋ ನಿಲ್ಲಿಸಿದ್ದಕ್ಕೆ ತಾಹ ಸಂಬಂಧಿಯನ್ನು ಪಕ್ಕದ ಮನೆ ನಿವಾಸಿ ಶಿವಕುಮಾರ್ ಮತ್ತು ಕುಟುಂಬದವರು ಪ್ರಶ್ನಿಸಿದ್ದಾರೆ. ಈ ವೇಳೆ ಪರಸ್ಪರ ಗಲಾಟೆ ನಡೆಯುತ್ತಿದ್ದಾಗ ಘಟನೆ ಸ್ಥಳಕ್ಕೆ ತೆರಳಿದ್ದ ಅಪರಿಚಿತ ಪಕ್ಕದಲ್ಲಿ ಇದ್ದ ಮಸೀದಿಯಿಂದ ಜೊತೆಗಾರರೊಂದಿಗೆ ಬಂದು ಮತ್ತೆ ಗಲಾಟೆ ಮಾಡಿದ್ದಾನೆ. ಶಿವಕುಮಾರ್ ಮನೆಗೆ ನುಗ್ಗಿ ಅನ್ಯಕೋಮಿನ ಗುಂಪಿನಿಂದ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ.

ಹಲ್ಲೆ ನಡೆಸಿ ನಾಪತ್ತೆಯಾದವರಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಗಲಾಟೆಗೆ ಸಂಬಂಧಿಸಿದಂತೆ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular