HomeIndiaಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಪತ್ನಿ ಕಾರ್ ಕಳವು, ಎಫ್‌ಐಆರ್ ದಾಖಲು

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಪತ್ನಿ ಕಾರ್ ಕಳವು, ಎಫ್‌ಐಆರ್ ದಾಖಲು

ನವದೆಹಲಿ: ಭಾರತೀಯ ಜನತಾ ಪಕ್ಷದ(ಬಿಜೆಪಿ) ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಪತ್ನಿಗೆ ಸೇರಿದ ಕಾರ್ ಅನ್ನು ಆಗ್ನೇಯ ದೆಹಲಿಯ ಗೋವಿಂದಪುರಿ ಪ್ರದೇಶದಿಂದ ಕಳವು ಮಾಡಲಾಗಿದೆ. ಗೋವಿಂದಪುರಿಯಲ್ಲಿರುವ ಸೇವಾ ಕೇಂದ್ರದಲ್ಲಿ ಊಟಕ್ಕೆ ಮನೆಗೆ ಹೋಗುವಾಗ ವಾಹನವನ್ನು ಚಾಲಕನಿಗೆ ವಹಿಸಲಾಗಿತ್ತು.

ಹಿಂತಿರುಗಿ ನೋಡಿದಾಗ ಕಾರ್ ನಾಪತ್ತೆಯಾಗಿರುವುದು ಗೊತ್ತಾಯಿತು. ದೂರನ್ನು ಸ್ವೀಕರಿಸಿದ ನಂತರ, ದೆಹಲಿ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಕಾರ್ ಗುರುಗ್ರಾಮ್ ಕಡೆಗೆ ಹೋಗುತ್ತಿರುವುದನ್ನು ಬಹಿರಂಗಪಡಿಸಿದೆ. ಆದರೆ, ಸದ್ಯಕ್ಕೆ ಕಾರ್ ಪತ್ತೆಯಾಗಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಘಟನೆ ಮಾರ್ಚ್ 19 ರಂದು ನಡೆದಿದ್ದು, ಹಿಮಾಚಲ ಪ್ರದೇಶ ನೋಂದಣಿ ಸಂಖ್ಯೆ HP-03-D-0021 ಹೊಂದಿರುವ ಬಿಳಿ ಬಣ್ಣದ ಫಾರ್ಚುನರ್ ಕಳವಾಗಿದ್ದು, ಚಾಲಕ ಜೋಗಿಂದರ್ ಅವರ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ. ಕಾರ್ ಪತ್ತೆಗೆ ಕಾರ್ಯಾಚರಣೆ ನಡೆಸಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular