ಭೋಪಾಲ್ : ಮಧ್ಯಪ್ರದೇಶದ ಉಜ್ಜಯಿನಿ ಮಹಾಕಾಲ್ ದೇವಸ್ಥಾನದಲ್ಲಿ ಸೋಮವಾರ ಸಂಭವಿಸಿದ ಭಾರಿ ಬೆಂಕಿಯಲ್ಲಿ ಕನಿಷ್ಠ 13 ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಆವರಣದಲ್ಲಿ ಹೋಳಿ ಆಚರಣೆಯ ನಡುವೆ ಮುಂಜಾನೆ ಭಸ್ಮಾ ಆರತಿ ಸಮಯದಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.ದೇವಾಲಯದ ಗರ್ಭಗುಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಉಜ್ಜಯಿನಿ ಜಿಲ್ಲಾಧಿಕಾರಿ ನೀರಜ್ ಕುಮಾರ್ ಸಿಂಗ್ ತಿಳಿಸಿದ್ದಾರೆ.ಘಟನೆಯಲ್ಲಿ ಹದಿಮೂರು ಪುರೋಹಿತರಿಗೆ ಸುಟ್ಟ ಗಾಯಗಳಾಗಿದ್ದು, ಇಲ್ಲಿನ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮ್ಯಾಜಿಸ್ಟೀರಿಯಲ್ ತನಿಖೆಗೆ ಆದೇಶಿಸಲಾಗಿದೆ” ಎಂದು ಸಿಂಗ್ ಹೇಳಿದರು.ಹೋಳಿ ಸಮಯದಲ್ಲಿ ಬಳಸುವ ಬಣ್ಣದ ಪುಡಿ ಎಸೆಯುವಾಗ ಬೆಂಕಿ ಕಾಣಿಸಿಕೊಂಡಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.