HomeKarnatakaBIG NEWS: ಮರಳು ಮಾಫಿಯಾಗೆ ಸಹೋದರರು ಬಲಿ; ಅಕ್ರಮವಾಗಿ ಮರಳು ತೆಗೆದಿದ್ದ ಗುಂಡಿಗೆ ಬಿದ್ದು ಇಬ್ಬರು...

BIG NEWS: ಮರಳು ಮಾಫಿಯಾಗೆ ಸಹೋದರರು ಬಲಿ; ಅಕ್ರಮವಾಗಿ ಮರಳು ತೆಗೆದಿದ್ದ ಗುಂಡಿಗೆ ಬಿದ್ದು ಇಬ್ಬರು ದುರ್ಮರಣ

ಹಾವೇರಿ: ಮರಳು ಮಾಫಿಯಾಗೆ ಇಬ್ಬರು ಸಹೋದರರು ಬಲಿಯಾಗಿರುವ ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ನದಿಹರಳಹಳ್ಳಿ ಗ್ರಾಮದಲ್ಲಿ ನಡೆದಿದೆ.

ಬಸವರಾಜ್ ಪವಾರ್, ನಾಗರಾಜ್ ಪವಾರ್ ಮೃತ ದುರ್ದೈವಿಗಳು. ತುಂಗಭದ್ರಾ ನದಿಯಲ್ಲಿ ಸ್ನಾನಕ್ಕೆಂದು ಇಳಿದಿದ್ದ ವೇಳೆ ಅಕ್ರಮವಾಗಿ ಮರಳು ತೆಗೆದಿದ್ದ ಗುಂಡಿಗೆ ಬಿದ್ದು ಮೃತಪಟ್ಟಿದ್ದಾರೆ.

ಕುಮಾರಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಅಕ್ರಮ ಮರಳುಗಾರಿಕೆ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular