ಬೆಂಗಳೂರು : ಬೆಂಗಳೂರಿಗರಿಗೆ ಯಾವುದೇ ಆಸ್ತಿ ತೆರಿಗೆ ಹೆಚ್ಚಳ ಇಲ್ಲ, ತೆರಿಗೆ ಹೆಚ್ಚಳವಾಗಲಿದೆ ಎಂಬ ಸುಳ್ಳು ಸುದ್ದಿ ಹರಿದಾಡುತ್ತಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ಈ ಬಗ್ಗೆ ಟ್ವೀಟ್ ನಲ್ಲಿ ಮಾಹಿತಿ ನೀಡಿದ ಡಿಸಿಎಂ ಡಿಕೆ ಶಿವಕುಮಾರ್ ಏಪ್ರಿಲ್ 1ರಿಂದ ಅನ್ವಯವಾಗುವಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ದರ ಏರಿಕೆಯಾಗಲಿದೆ ಎನ್ನುವ ಸುಳ್ಳು ಸುದ್ದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದು ನನ್ನ ಗಮನಕ್ಕೆ ಬಂದಿದೆ. BBMP ಯಾವುದೇ ಆಸ್ತಿ ತೆರಿಗೆಯನ್ನು ಏರಿಕೆ ಮಾಡಿಲ್ಲ 2016ರಲ್ಲಿ ಸೂಚಿಸಿರುವ ದರದಂತೆಯೇ ಪ್ರಸ್ತುತ ಆಸ್ತಿ ತೆರಿಗೆ ದರಗಳು ಚಾಲ್ತಿಯಲ್ಲಿರುತ್ತವೆ ಹಾಗೂ ಮುಂದುವರಿಯಲಿವೆ. ಬೆಂಗಳೂರಿನ ನಿವಾಸಿಗಳು ಆತಂಕಪಡುವ ಅವಶ್ಯಕತೆಯಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ ಜಾರಿಗೆ ತಂದಿರುವ ಹೊಸ ಆಸ್ತಿ ತೆರಿಗೆ ವ್ಯವಸ್ಥೆಯಿಂದಾಗಿ ಬರುವ ಏಪ್ರಿಲ್ನಿಂದ ನಗರದ ಎಲ್ಲಾ ಮಾದರಿ ಆಸ್ತಿಗಳ ತೆರಿಗೆ ಪ್ರಮಾಣ ಕನಿಷ್ಠ ಶೇಕಡ 5.3ರಿಂದ ಗರಿಷ್ಠ ಶೇ.8.2ರವರೆಗೆ ಹೆಚ್ಚಳವಾಗಲಿದೆ ಎಂದು ಹೇಳಲಾಗಿತ್ತು.