HomeKarnatakaLok Sabha Election: ನಾಮಪತ್ರ ಸಲ್ಲಿಕೆ, ಪರಿಶೀಲನೆ ಮತ್ತು ಹಿಂಪಡೆಯುವ ದಿನಾಂಕ ಯಾವುದು..? ಇಲ್ಲಿದೆ...

Lok Sabha Election: ನಾಮಪತ್ರ ಸಲ್ಲಿಕೆ, ಪರಿಶೀಲನೆ ಮತ್ತು ಹಿಂಪಡೆಯುವ ದಿನಾಂಕ ಯಾವುದು..? ಇಲ್ಲಿದೆ ಮಾಹಿತಿ

ಬೆಂಗಳೂರು : ಲೋಕಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಕರ್ನಾಟಕದಲ್ಲಿ ಏಪ್ರಿಲ್ 26 ಹಾಗೂ ಮೇ 7ರಂದು 2 ಹಂತದಲ್ಲಿ ಮತದಾನ ನಡೆಯಲಿದೆ. ದೇಶದಲ್ಲಿ 7 ಹಂತಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ. ಕರ್ನಾಟಕದಲ್ಲಿ ಏಪ್ರಿಲ್ 26 ರಂದು ಮೊದಲ ಹಂತದ ಮತದಾನ ಪ್ರಕ್ರಿಯೆ ನಡೆಯಲಿದ್ದು, ಎರಡನೇ ಹಂತದ ಮತದಾದನ ಮೇ 7 ರಂದು ನಡೆಯಲಿದೆ ಎಂದರು.

ಕರ್ನಾಟಕದಲ್ಲಿ 28 ಲೋಕಸಭಾ ಕ್ಷೇತ್ರಗಳಿಗೆ ಎರಡು ಹಂತದಲ್ಲಿ ಮತದಾನ ನಡೆಯಲಿದೆ. ದಕ್ಷಿಣ ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ನಡೆಯಲಿದ್ದು, ಉತ್ತರ ಕರ್ನಾಟಕ ಎರಡನೇ ಹಂತದಲ್ಲಿ ಮತದಾನ ನಡೆಯಲಿದೆ ಎಂದು ಹೇಳಿದ್ದಾರೆ.

ಪ್ರಮುಖ ದಿನಾಂಕಗಳು

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

• ನಾಮಪತ್ರಗಳನ್ನು ಸಲ್ಲಿಸಲು : ಏಪ್ರಿಲ್ 4 ಕೊನೆಯ ದಿನವಾಗಿದೆ.

• ನಾಮಪತ್ರ ಪರಿಶೀಲನೆ : ಏಪ್ರಿಲ್ 5

• ನಾಮಪತ್ರ ಹಿಂಪಡೆಯಲು : ಏಪ್ರಿಲ್ 8 ಕೊನೆಯ ದಿನಾಂಕ

• ದಕ್ಷಿಣ ಕರ್ನಾಟಕದ ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್ 26 ರಂದು ಮತದಾನ ನಡೆಯಲಿದೆ.

• ಉತ್ತರ ಕರ್ನಾಟಕದ ಲೋಕಸಭಾ ಕ್ಷೇತ್ರಗಳಿಗೆ ಮೇ 7 ರಂದು ಮತದಾನ ನಡೆಯಲಿದೆ
• ಮತಗಳ ಎಣಿಕೆ ಮತ್ತು ಫಲಿತಾಂಶ : ಜೂನ್ 4 ರಂದು

ರಾಜ್ಯದಲ್ಲಿ ಏಪ್ರಿಲ್ 26 ರಂದು ಈ ಜಿಲ್ಲೆಗಳಲ್ಲಿ ಮತದಾನ

ಚಿತ್ರದುರ್ಗ, ಉಡುಪಿ-ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು-ಕೊಡಗು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ.

ಮೇ 7 ರಂದು ರಾಜ್ಯದ ಈ ಜಿಲ್ಲೆಗಳಲ್ಲಿ ಮತದಾನ

ಕರ್ನಾಟಕದಲ್ಲಿ ಮೇ 7 ರಂದು ಒಟ್ಟು 14 ಜಿಲ್ಲೆಗಳಲ್ಲಿ ಮತದಾನ ನಡೆಯಲಿದೆ. ಬೆಳಗಾವಿ, ಬಳ್ಳಾರಿ, ಚಿಕ್ಕೋಡಿ, ಹಾವೇರಿ-ಗದಗ, ಕಲಬುರಗಿ, ಬೀದರ್, ಹುಬ್ಬಳಿ – ಧಾರವಾಡ, ಕೊಪ್ಪಳ, ರಾಯಚೂರು, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ, ಬಾಗಲಕೋಟೆ, ವಿಜಯಪುರ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular