ನವದೆಹಲಿ : ಪ್ರಧಾನಿ ಮೋದಿ ವಿರುದ್ಧ ಸಚಿವ ಶಿವರಾಜ್ ತಂಗಡಗಿ ಹೇಳಿಕೆಗೆ ಬಿಜೆಪಿ ತಿರುಗೇಟು ನೀಡಿದೆ.
ಅಯೋಗ್ಯ ಕಾಂಗ್ರೆಸ್ ನಾಯಕರು ನಮ್ಮದು ಎಲುಬಿಲ್ಲದ ನಾಲಿಗೆ ಎನ್ನುವುದನ್ನು ತೋರಿಸಿಕೊಳ್ಳುತ್ತಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಹಿಡಿದು ನಾಲಾಯಕ್ ಕೈ ಶಾಸಕರು ನಾಲಿಗೆ ಹರಿಬಿಡುತ್ತಿದ್ದಾರೆ. ಕೈಲಾಗದವನು ಮೈ ಪರಚಿಕೊಂಡ ಎನ್ನುವಂತೆ ಕೊಪ್ಪಳದಲ್ಲಿ ಸಚಿವ ಶಿವರಾಜ್ ತಂಗಡಗಿ ಅವರು ಹತಾಶೆಗೊಂಡು ತಮ್ಮ ವ್ಯಕ್ತಿತ್ವವನ್ನು ಬೆತ್ತಲಾಗಿಸಿಕೊಂಡಿದ್ದಾರೆ. ಮೋದಿ ಮೋದಿ ಎನ್ನುವ ಯುವಕರ ಕಪಾಳಕ್ಕೆ ಹೊಡಿಯಿರಿ ಎನ್ನುವ ಸಚಿವರ ಕಪಾಳಕ್ಕೆ ಜನತೆ ಲೋಕಸಭಾ ಚುನಾವಣೆಯಲ್ಲಿ ಬಾರಿಸುವುದು ಶತಸಿದ್ಧ. ಅಧಿಕಾರಕ್ಕೆ ಬಂದು ಹತ್ತು ತಿಂಗಳಾದರೂ ಬರ ಪರಿಹಾರ ಕೊಡದೆ, ಅಭಿವೃದ್ಧಿಯೂ ಮಾಡದೆ, ಕುಡಿಯುವುದಕ್ಕೆ ನೀರು ಕೊಡಲಾಗದೆ ಇರುವ ಅಯೋಗ್ಯರು, ಜನರಿಂದ ಆಯ್ಕೆಯಾದ ಪ್ರಧಾನಿ ಮೋದಿ ಅವರ ಬಗ್ಗೆ ಮಾತನಾಡುತ್ತಿರುವುದು ವಿಪರ್ಯಾಸ ಎಂದು ಸಚಿವ ಶಿವರಾಜ್ ತಂಗಡಗಿ ವಿರುದ್ಧ ಬಿಜೆಪಿ ವಾಗ್ಧಾಳಿ ನಡೆಸಿದೆ.
ಹಾಗೆಯೇ ಗಾಲಿ ಜನಾರ್ಧನ ರೆಡ್ಡಿ ಅವರು ಬಿಜೆಪಿ ಪಕ್ಷಕ್ಕೆ ಮರಳಿರುವುದು ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಿಜೆಪಿಗೆ ಹೊಸ ಶಕ್ತಿ ತಂದಿದೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಎನ್ಡಿಎ ಐತಿಹಾಸಿಕ ಗೆಲುವು ದಾಖಲಿಸಲಿದೆ ಎಂದು ಬಿಜೆಪಿ ವಿಶ್ವಾಸ ವ್ಯಕ್ತಪಡಿಸಿದೆ.