HomeKarnatakaಇಂದು ಮಂಡ್ಯ 'ಮೈತ್ರಿ ಅಭ್ಯರ್ಥಿ' ಘೋಷಣೆ : ಮಾಜಿ ಸಿಎಂ ಕುಮಾರಸ್ವಾಮಿ ಸ್ಪರ್ಧೆ ಫಿಕ್ಸ್?

ಇಂದು ಮಂಡ್ಯ ‘ಮೈತ್ರಿ ಅಭ್ಯರ್ಥಿ’ ಘೋಷಣೆ : ಮಾಜಿ ಸಿಎಂ ಕುಮಾರಸ್ವಾಮಿ ಸ್ಪರ್ಧೆ ಫಿಕ್ಸ್?

ಬೆಂಗಳೂರು : ಲೋಕಸಭೆ ಚುನಾವಣೆಗೆ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ಇಂದು ಇಂದು ಅಭ್ಯರ್ಥಿಗಳ ಹೆಸರು ಪ್ರಕಟಿಸುವ ಸಾಧ್ಯತೆ ಇದೆ. ಹೌದು, ಇಂದು ಮಂಡ್ಯ ಮೈತ್ರಿ ಅಭ್ಯರ್ಥಿ ಘೋಷಣೆಯಾಗಲಿದ್ದು, ಹೆಚ್ಡಿಕೆ ಸ್ಪರ್ಧಿಸುವುದು ಫಿಕ್ಸ್ ಆದಂತಿದೆ.

ಹಾಸನ, ಮಂಡ್ಯ, ಕೋಲಾರ ಕ್ಷೇತ್ರಗಳಿಗೆ ಜೆಡಿಎಸ್ ಅಭ್ಯರ್ಥಿಗಳನ್ನು ಪ್ರಕಟಿಸಲಿದ್ದು, ಮಂಡ್ಯ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ. ಮಂಡ್ಯ ಕ್ಷೇತ್ರದಿಂದ ಮೈತ್ರಿ ಅಭ್ಯರ್ಥಿಯಾಗಿ ಯಾರು ಸ್ಪರ್ಧೆ ಮಾಡಬೇಕೆಂಬ ಕುತೂಹಲಕ್ಕೆ ಇಂದು ತೆರೆ ಬೀಳಲಿದೆ. ಹೆಚ್ಡಿಕೆ ಮಂಡ್ಯದಿಂದ ಸ್ಪರ್ಧೆ ಮಾಡೋದು ಕನ್ಫರ್ಮ್ ಆಗಿದ್ದು, ಇಂದು ಅಧಿಕೃತವಾಗಿ ಘೋಷಣೆಯಾಗಲಿದೆ.

ಮಂಡ್ಯ ಜನರು ಕುಮಾರಸ್ವಾಮಿಯವರೇ ಅಭ್ಯರ್ಥಿಯಾಗಬೇಕೆಂದು ಒತ್ತಡ ಹಾಕುತ್ತಿದ್ದಾರೆ. ಚನ್ನಪಟ್ಟಣ ಕ್ಷೇತ್ರ ಬಿಟ್ಟು ಹೋಗದಂತೆ ಅಲ್ಲಿನ ಕಾರ್ಯಕರ್ತರು ಕೂಡ ಒತ್ತಾಯಿಸುತ್ತಿದ್ದಾರೆ. ಈ ನಡುವೆ ನಿಖಿಲ್ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸಬೇಕೆಂದು ಕೆಲವು ಕಾರ್ಯಕರ್ತರು ಒತ್ತಡ ಹಾಕುತ್ತಿರುವ ಹಿನ್ನೆಲೆಯಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರೊಂದಿಗೆ ಚರ್ಚೆ ನಡೆಸಿ ಕುಮಾರಸ್ವಾಮಿ ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular