ಬೆಂಗಳೂರು : ಮಹಿಳೆ ಮೇಲೆ ಬಿಎಂಟಿಸಿಕಂಡಕ್ಟರ್ ಹಿಗ್ಗಾಮುಗ್ಗಾ ಹಲ್ಲೆ ನಡೆಸಿ ದರ್ಪ ಮೆರೆದ ಘಟನೆ ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಟಿಕೆಟ್ ನೀಡುವ ವಿಚಾರಕ್ಕೆ ಕಿರಿಕ್ ನಡೆದಿದೆ ಎನ್ನಲಾಗಿದ್ದು, ಮಹಿಳೆ ಹಾಗೂ ಕಂಡಕ್ಟರ್ ನಡುವೆ ವಾಗ್ವಾದ ನಡೆದಿದೆ. ಬಳಿಕ ರೊಚ್ಚಿಗೆದ್ದ ಬಿಎಂಟಿಸಿ ಬಸ್ ಕಂಡಕ್ಟರ್ ಮನಬಂದಂತೆ ಮಹಿಳೆ ಮೇಲೆ ಹಲ್ಲೆ ನಡೆಸಿದ್ದಾನೆ. ಹಲ್ಲೆ ನಡೆಸಿದ ದೃಶ್ಯ ಪ್ರಯಾಣಿಕರ ಮೊಬೈಲ್ ನಲ್ಲಿ ಸೆರೆಯಾಗಿದೆ.
ಘಟನೆ ಸಂಬಂಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದ್ದು, ಪೊಲೀಸರು ಸ್ಥಳ ಮಹಜರು ನಡೆಸಿ ತನಿಖೆ ನಡೆಸುತ್ತಿದ್ದಾರೆ. ಬಿಎಂಟಿಸಿ ಕಂಡಕ್ಟರ್ ವರ್ತನೆಗೆ ಸಾರ್ವಜನಿಕರು ಆಕ್ರೋಶ ಹೊರ ಹಾಕಿದ್ದಾರೆ. ಇಂದು ಬೆಳಗ್ಗೆ 10 ಗಂಟೆಗೆ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.