HomeIndiaBIG NEWS: ನೀಟ್ ಪರೀಕ್ಷಾ ಅಭ್ಯರ್ಥಿ ಆತ್ಮಹತ್ಯೆ

BIG NEWS: ನೀಟ್ ಪರೀಕ್ಷಾ ಅಭ್ಯರ್ಥಿ ಆತ್ಮಹತ್ಯೆ

ಕೋಟಾ: ನೀಟ್ ಪರೀಕ್ಷೆಗೆ ಸಿದ್ಧತೆ ನಡೆಸಿದ್ದ ಮತ್ತೋರ್ವ ಅಭ್ಯರ್ಥಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಜಸ್ಥಾನದ ಕೋಟಾದಲ್ಲಿ ನಡೆದಿದೆ. ಇದು ಈ ವರ್ಷ ನಡೆದ 7ನೇ ಪ್ರಕರಣವಾಗಿದೆ.

20 ವರ್ಷದ ಉರುಜ್ ಖಾನ್ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಕೋಟಾದ ವಿಜ್ಞಾನ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಉರುಜ್ ಖಾನ್ ನೀಟ್ ಪರೀಕ್ಷೆಗೆ ಸಿದ್ಧತೆ ನಡೆಸಿದ್ದ. ಸೀಲಿಂಗ್ ಫ್ಯಾನ್ ಗೆ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾನೆ.

ಉರುಜ್ ಖಾನ್ ಉತ್ತರ ಪ್ರದೇಶದ ಖನೌಜ್ ನಿವಾಸಿಯಾಗಿದ್ದ. ಉರುಜ್ ವಾಸವಿದ್ದ ಕಟ್ಟಡದಲ್ಲಿದ್ದ ಇತರ ಸಿಬ್ಬಂದಿಗಳು ಸೀಲಿಂಗ್ ಫ್ಯಾನ್ ಗೆ ನೇಣು ಬಿಗಿದಿರುವುದನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕಾಗಮಿಸಿದ ಪೊಲೀಸರು ಮೃತದೇಹವನ್ನು ವಶಕ್ಕೆ ಪಡೆದು ತನಿಖೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನು ರಾಜಸ್ಥಾನದ ಕೋಟಾದಲ್ಲಿ ಕಳೆದ ವರ್ಷ 29 ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿದ್ದರು. ಸ್ಪರ್ಧಾತ್ಮಕ ಪರೀಕ್ಷೆ ತಯಾರಿಗೆಂದು ಕೋಟಾಗೆ ಆಗಮಿಸುವ ಹಲವು ವಿದ್ಯಾರ್ಥಿಗಳು ಮಾನಸಿಕ ಒತ್ತಡ ಸೇರಿದಂತೆ ಇತರೆ ಕರಣಗಳಿಂದ ಆತ್ಮಹತ್ಯೆಯಂತಹ ನಿರ್ಧಾರ ಕೈಗೊಳ್ಳುತ್ತಿರುವುದು ಆತಂಕಕಾರಿ ಬೆಳವಣಿಗೆ.

For Latest News Updates, Join Our Whatsapp Community🚩
RELATED ARTICLES

Most Popular