ವಾಯವ್ಯ ಪಾಕಿಸ್ತಾನದಲ್ಲಿ ಮಂಗಳವಾರ ಆತ್ಮಾಹುತಿ ಬಾಂಬರ್ ನಡೆಸಿದ ದಾಳಿಯಲ್ಲಿ ಐವರು ಚೀನೀ ಪ್ರಜೆಗಳು ಸಾವನ್ನಪ್ಪಿದ್ದಾರೆ ಎಂದು ವರದಿ ತಿಳಿಸಿದೆ.
ಇಸ್ಲಾಮಾಬಾದ್ನಿಂದ ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದಲ್ಲಿರುವ ದಾಸು ಶಿಬಿರಕ್ಕೆ ಪ್ರಯಾಣಿಸುತ್ತಿದ್ದ ಚೀನಾದ ಎಂಜಿನಿಯರ್ಗಳ ಬೆಂಗಾವಲು ವಾಹನಕ್ಕೆ ಆತ್ಮಾಹುತಿ ಬಾಂಬರ್ ಸ್ಫೋಟಕ ತುಂಬಿದ ವಾಹನವನ್ನು ಡಿಕ್ಕಿ ಹೊಡೆದಿದ್ದಾನೆ ಎಂದು ಪ್ರಾದೇಶಿಕ ಪೊಲೀಸ್ ಮುಖ್ಯಸ್ಥ ಮೊಹಮ್ಮದ್ ಅಲಿ ಗಂಡಾಪುರ್ ಅವರನ್ನು ಉಲ್ಲೇಖಿಸಿ ವರದಿ ತಿಳಿಸಿದೆ.