ಬೆಂಗಳೂರು : ಬಿಎಂಟಿಸಿ ಬಸ್ನಲ್ಲಿ ಮಹಿಳೆ ಮೇಲೆ ಕಂಡಕ್ಟರ್ ಹಲ್ಲೆ ಮಾಡಿರುವ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಟಿಕೆಟ್ ವಿಚಾರವಾಗಿ ಮಹಿಳೆ ಮತ್ತು ಕಂಡಕ್ಟರ್ ನಡುವೆ ಗಲಾಟೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕಂಡಕ್ಟರ್ ಹೊನ್ನಪ್ಪ ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಟಿಕೆಟ್ ವಿಚಾರವಾಗಿ ಮಹಿಳೆ ಮತ್ತು ಕಂಡಕ್ಟರ್ ನಡುವೆ ಗಲಾಟೆ ನಡೆದಿದೆ , ಈ ವೇಳೆ ಕೋಪಗೊಂಡ ಕಂಡಕ್ಟರ್, ಮಹಿಳೆ ಮೇಲೆ ಹಲ್ಲೆ ನಡೆಸಿದ್ದಾನೆ. ಈ ದೃಶ್ಯಗಳು ಬಸ್ನಲ್ಲಿದ್ದ ಪ್ರಯಾಣಿಕರ ಮೊಬೈಲ್ನಲ್ಲಿ ಸೆರೆಯಾಗಿದೆ. ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಐಪಿಸಿ 354A ಅಡಿ ಎಫ್ಐಆರ್ (FIR) ದಾಖಲಾಗಿದೆ.
ಟಿಕೆಟ್ ನೀಡುವ ವಿಚಾರಕ್ಕೆ ಕಿರಿಕ್ ನಡೆದಿದೆ ಎನ್ನಲಾಗಿದ್ದು, ಮಹಿಳೆ ಹಾಗೂ ಕಂಡಕ್ಟರ್ ನಡುವೆ ವಾಗ್ವಾದ ನಡೆದಿದೆ. ಬಳಿಕ ರೊಚ್ಚಿಗೆದ್ದ ಬಿಎಂಟಿಸಿ ಬಸ್ ಕಂಡಕ್ಟರ್ ಮನಬಂದಂತೆ ಮಹಿಳೆ ಮೇಲೆ ಹಲ್ಲೆ ನಡೆಸಿದ್ದಾನೆ. ಹಲ್ಲೆ ನಡೆಸಿದ ದೃಶ್ಯ ಪ್ರಯಾಣಿಕರ ಮೊಬೈಲ್ ನಲ್ಲಿ ಸೆರೆಯಾಗಿದೆ. ಘಟನೆ ಸಂಬಂಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದ್ದು, ಪೊಲೀಸರು ಕಂಡಕ್ಟರ್ ಹೊನ್ನಪ್ಪನನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಮಹಿಳೆ ಸಹ ಕಂಡಕ್ಟರ್ ಕೆನ್ನೆಗೆ ಬಾರಿಸಿರೋದು ವಿಡಿಯೋದಲ್ಲಿ ಸೆರೆಯಾಗಿದೆ. ಇದರಿಂದ ಮತ್ತಷ್ಟು ಕೋಪಗೊಂಡ ಕಂಡಕ್ಟರ್ ಹಲ್ಲೆ ನಡೆಸಿದ್ದಾನೆ. ಇಂದು ಬೆಳಗ್ಗೆ 10 ಗಂಟೆಗೆ ನಡೆದ ಘಟನೆಯ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದೆ.