HomeKarnatakaBIG NEWS: ಯಶವಂತಪುರ ರೈಲು ನಿಲ್ದಾಣದಲ್ಲಿ ಬೆಂಕಿ ಅವಘಡ

BIG NEWS: ಯಶವಂತಪುರ ರೈಲು ನಿಲ್ದಾಣದಲ್ಲಿ ಬೆಂಕಿ ಅವಘಡ

ಬೆಂಗಳೂರು: ಯಶವಂತಪುರ ರೈಲು ನಿಲ್ದಾಣದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಅಡುಗೆ ಮಾಡಲು ನಿರ್ಮಿಸಿದ್ದ ಎರಡು ಕಂಟೇನರ್ ಗಳು ಬೆಂಕಿಗಾಹುತಿಯಾಗಿರುವ ಘಟನೆ ನಡೆದಿದೆ.

ಎರಡು ಕಂಟೇರ್ ನರ್ ಬೋಗಿ ನೋಡ ನೀಡುತ್ತಿದ್ದಂತೆಯೇ ಬೆಂಕಿಯ ಕೆನ್ನಾಲಿಗೆಗೆ ಧಗಧಗನೆ ಹೊತ್ತಿ ಉರಿದಿದೆ. ಒಂಡು ಬೋಗಿಯಲ್ಲಿ ಕ್ಯಾಂಟೀನ್ ನಡೆಸಲಾಗುತ್ತಿತ್ತು. ಮತ್ತೊಂದರಲ್ಲಿ ಧಾನ್ಯ, ತರಕಾರಿ ಸ್ಟೋರ್ ಮಾಡಿ ಇಡಲಾಗಿತ್ತು. ದಾನ್ಯ, ತರಕಾರಿ ಇರಿಸಲಾಗಿದ್ದ ಬೋಗಿಯಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದೆ. ಪಕ್ಕದ ಕಂಟೇನರ್ ಗೂ ಬೆಂಕಿ ವ್ಯಾಪಿಸಿದೆ.

ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸುವಲ್ಲಿ ನಿರತರಾಗಿದ್ದಾರೆ. ಯಶವಂತಪುರ ರೈಲು ನಿಲ್ದಾಣದ ಪ್ಲಾಟ್ ಫಾರ್ಮ್ 6ರಲ್ಲಿ ಈ ಅವಘಡ ಸಂಭವಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular