ಬೆಂಗಳೂರು: ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ಪ್ರಸಕ್ತ 2024ನೇ ಸಾಲಿನ ಕೊಬ್ಬರಿ ಖರೀದಿ ಪ್ರಕ್ರಿಯೆ ಆರಂಭಿಸಲಾಗುವುದು. ರಾಜ್ಯದ 9 ಜಿಲ್ಲೆಗಳಲ್ಲಿ ಏಪ್ರಿಲ್ 1 ರಿಂದ ಕೊಬ್ಬರಿ ಖರೀದಿ ಆರಂಭಿಸಲಾಗುವುದು.
ಮಾರ್ಚ್ 9ರಂದು ಕೊಬ್ಬರಿ ಮಾರಾಟಕ್ಕೆ ನೋಂದಣಿ ಅಂತ್ಯವಾಗಿದ್ದು, 9 ಜಿಲ್ಲೆಗಳಿಂದ 58,893 ರೈತರು ನೋಂದಾಯಿಸಿಕೊಂಡಿದ್ದಾರೆ. ಇವರಿಗೆ ಜೇಷ್ಠತೆ ಆಧಾರದಲ್ಲಿ ಖರೀದಿ ಮಾಹಿತಿ ನೀಡಿ ಕೊಬ್ಬರಿ ಖರೀದಿಸಲಾಗುತ್ತದೆ.
ರಾಜ್ಯ ಕೃಷಿ ಮಾರಾಟ ಮಂಡಳಿಯನ್ನು ನೋಡಲ್ ಏಜೆನ್ಸಿಯಾಗಿ ನೇಮಿಸಲಾಗಿದೆ. ತುಮಕೂರು, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ರಾಜ್ಯ ಕೃಷಿ ಮಾರಾಟ ಮಂಡಳಿಯಿಂದ, ಹಾಸನ ಸೇರಿದಂತೆ ಉಳಿದ ಜಿಲ್ಲೆಗಳಲ್ಲಿ ರಾಜ್ಯ ಸಹಕಾರ ಮಾರಾಟ ಮಹಾಮಂಡಳಿಯನ್ನು ಖರೀದಿ ಸಂಸ್ಥೆಯಾಗಿ ನೇಮಿಸಲಾಗಿದೆ.