HomeKarnatakaBIG NEWS: 15 ಬಿಜೆಪಿ ಕಾರ್ಯಕರ್ತರ ವಿರುದ್ಧ FIR ದಾಖಲು

BIG NEWS: 15 ಬಿಜೆಪಿ ಕಾರ್ಯಕರ್ತರ ವಿರುದ್ಧ FIR ದಾಖಲು

ಚಿಕ್ಕಮಗಳೂರು: ಚಿಕ್ಕಮಗಳುರಿನಲ್ಲಿ ಇಂಧನ ಸಚಿವ ಕೆ.ಜೆ.ಜಾರ್ಜ್ ನೇತೃತ್ವದಲ್ಲಿ ನಡೆಯುತ್ತಿದ್ದ ಸಭೆಗೆ ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿ, ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಪ್ರಕರಣ ಸಂಬಂಧ ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ಮೋದಿ ಮೋದಿ ಎನ್ನುವ ಯುವಕರ ಕಪಾಳಕ್ಕೆ ಹೊಡೆಯಿರಿ ಎಂಬ ಸಚಿವ ಶಿವರಾಜ್ ತಂಗಡಗಿ ಹೇಳಿಕೆ ಖಂಡಿಸಿ ಸರ್ಕಾರದ ವಿರುದ್ಧ ಹಾಗೂ ಸಚಿವ ಕೆ.ಜೆ.ಜಾರ್ಜ್ ನಡೆಸುತ್ತಿದ್ದ ಸಭೆಗೆ ಮುತ್ತಿಗೆ ಹಾಕಲು ಮುಂದಾಗಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಬಿಜೆಪಿ ಕಾರ್ಯಕರ್ತರ ವಿರುದ್ಧ ಚುನಾವಣಾ ಆಧಿಕಾರಿಗಳು ಚಿಕ್ಕಮಗಳೂರು ನಗರ ಠಾಣೆಯಲ್ಲಿ ನೀತಿ ಸಂಹಿತೆ ಜಾರಿ ನಡುವೆಯೂ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ದೂರು ದಾಖಲಿಸಿದ್ದರು.

ಅಧಿಕಾರಿಗಳ ದೂರಿನ ಆಧಾರದ ಮೇಲೆ ಬಿಜೆಪಿಯ 15 ಕ್ಕೂ ಹೆಚ್ಚು ಕಾರ್ಯಕರ್ತರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular