ಬೆಂಗಳೂರು : ಬಿಎಂಟಿಸಿ ಬಸ್ ನಲ್ಲಿ ಮಹಿಳೆ ಮೇಲೆ ಹಿಗ್ಗಾಮುಗ್ಗಾ ಹಲ್ಲೆ ಮಾಡಿರುವ ನಡೆಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಇದೀಗ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗಿದೆ.
ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳಾ ಪ್ರಯಾಣಿಕ ಮತ್ತು ಬಸ್ ಕಂಡಕ್ಟರ್ ನಡುವೆ ಗಲಾಟೆ ನಡೆದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಘಟನೆಯನ್ನು ಚಿತ್ರಿಸುವ ವೀಡಿಯೊ ವ್ಯಾಪಕವಾಗಿ ಪ್ರಸಾರವಾದ ನಂತರ, ಬೆಂಗಳೂರು ಮಹಾನಗರ ಸಾರಿಗೆ ನಿಗಮ (ಬಿಎಂಟಿಸಿ) ಆರೋಪಿ ಕಂಡಕ್ಟರ್ ಅನ್ನು ಅಮಾನತುಗೊಳಿಸುವ ಮೂಲಕ ತ್ವರಿತವಾಗಿ ಪ್ರತಿಕ್ರಿಯಿಸಿದೆ.
ಟಿಕೆಟ್ ವಿಚಾರವಾಗಿ ಮಹಿಳೆ ಮತ್ತು ಕಂಡಕ್ಟರ್ ನಡುವೆ ಗಲಾಟೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕಂಡಕ್ಟರ್ ಹೊನ್ನಪ್ಪ ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು.
ಟಿಕೆಟ್ ವಿಚಾರವಾಗಿ ಮಹಿಳೆ ಮತ್ತು ಕಂಡಕ್ಟರ್ ನಡುವೆ ಗಲಾಟೆ ನಡೆದಿದೆ , ಈ ವೇಳೆ ಕೋಪಗೊಂಡ ಕಂಡಕ್ಟರ್, ಮಹಿಳೆ ಮೇಲೆ ಹಲ್ಲೆ ನಡೆಸಿದ್ದಾನೆ. ಈ ದೃಶ್ಯಗಳು ಬಸ್ನಲ್ಲಿದ್ದ ಪ್ರಯಾಣಿಕರ ಮೊಬೈಲ್ನಲ್ಲಿ ಸೆರೆಯಾಗಿದೆ. ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಐಪಿಸಿ 354A ಅಡಿ ಎಫ್ಐಆರ್ (FIR) ದಾಖಲಾಗಿದೆ.
ಟಿಕೆಟ್ ನೀಡುವ ವಿಚಾರಕ್ಕೆ ಕಿರಿಕ್ ನಡೆದಿದೆ ಎನ್ನಲಾಗಿದ್ದು, ಮಹಿಳೆ ಹಾಗೂ ಕಂಡಕ್ಟರ್ ನಡುವೆ ವಾಗ್ವಾದ ನಡೆದಿದೆ. ಬಳಿಕ ರೊಚ್ಚಿಗೆದ್ದ ಬಿಎಂಟಿಸಿ ಬಸ್ ಕಂಡಕ್ಟರ್ ಮನಬಂದಂತೆ ಮಹಿಳೆ ಮೇಲೆ ಹಲ್ಲೆ ನಡೆಸಿದ್ದಾನೆ. ಹಲ್ಲೆ ನಡೆಸಿದ ದೃಶ್ಯ ಪ್ರಯಾಣಿಕರ ಮೊಬೈಲ್ ನಲ್ಲಿ ಸೆರೆಯಾಗಿದೆ. ಘಟನೆ ಸಂಬಂಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದ್ದು, ಪೊಲೀಸರು ಕಂಡಕ್ಟರ್ ಹೊನ್ನಪ್ಪನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.