HomeKarnatakaBIG NEWS: ಬಿಜೆಪಿ ಪರಿಷತ್ ಸದಸ್ಯೆ ತೇಜಸ್ವಿನಿ ಗೌಡ ರಾಜೀನಾಮೆ

BIG NEWS: ಬಿಜೆಪಿ ಪರಿಷತ್ ಸದಸ್ಯೆ ತೇಜಸ್ವಿನಿ ಗೌಡ ರಾಜೀನಾಮೆ

ಬೆಂಗಳೂರು: ವಿಧಾನಪರಿಷತ್ ಬಿಜೆಪಿ ಸದಸ್ಯೆ ತೇಜಸ್ವಿನಿ ಗೌಡ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ವಿಧಾನಸೌಧದಲ್ಲಿ ಸಭಾಪತಿ ಬಸವರಾಜ್ ಹೊರಟ್ಟಿ ಅವರನ್ನು ಭೇಟಿಯಾದ ತೇಜಸ್ವಿನಿ, ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದರು. ಈ ಬಗ್ಗೆ ಬಸವರಾಜ್ ಹೊರಟ್ಟಿ ಮಾಹಿತಿ ನೀಡಿದ್ದು, ಪರಿಷತ್ ಸದಸ್ಯೆ ತೇಜಸ್ವಿನಿ ಗೌಡ ರಾಜೀನಾಮೆ ನೀಡಿದ್ದಾರೆ. ವೈಯಕ್ತಿಕ ಕಾರಣಕ್ಕೆ ರಾಜೀನಾಮೆ ನೀಡಿದ್ದಾಗಿ ತಿಳಿಸಿದ್ದಾರೆ ಎಂದರು.

ತೇಜಸ್ವಿನಿ ಗೌಡ ಅವರ ಪರಿಷತ್ ಸದಸ್ಯತ್ವದ ಅವಧಿ ಜೂನ್ ಅವರೆಗೂ ಇತ್ತು. ಆದರೆ ಅವರೇ ಖುದ್ದು ಬಂದು ರಾಜೀನಾಮೆ ನೀಡಿದ ಕಾರಣಕ್ಕೆ ರಾಜೀನಾಮೆ ಸ್ವೀಕರಿಸಿದ್ದೇನೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತೇಜಸ್ವಿನಿ ಗೌಡ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಟಿಕೆಟ್ ಕೈತಪ್ಪಿದ್ದಕ್ಕೆ ಬಿಜೆಪಿ ತೊರೆಯಲು ಮುಂದಾಗಿ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular