HomeKarnatakaಇಂದು ನಾಮಪತ್ರ ಸಲ್ಲಿಕೆ ಮೊದಲ ದಿನವೇ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ಉಮೇದುವಾರಿಕೆ

ಇಂದು ನಾಮಪತ್ರ ಸಲ್ಲಿಕೆ ಮೊದಲ ದಿನವೇ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ಉಮೇದುವಾರಿಕೆ

ರಾಮನಗರ: ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು, ಮೊದಲ ದಿನವೇ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ಉಮೇದುವಾರಿಕೆ ಸಲ್ಲಿಸಲಿದ್ದಾರೆ.

ಮಾರ್ಚ್ 28ರಂದು ಬೆಳಿಗ್ಗೆ 11 ಗಂಟೆಗೆ ಡಿ.ಕೆ. ಸುರೇಶ್ ನಾಮಪತ್ರ ಸಲ್ಲಿಸಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ರಾಮಲಿಂಗಾರೆಡ್ಡಿ, ಪರಮೇಶ್ವರ್ ಸೇರಿದಂತೆ ಹಲವು ನಾಯಕರು ಭಾಗವಹಿಸಲಿದ್ದಾರೆ.

ಬಿಜೆಪಿ -ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ಡಾ.ಸಿ.ಎನ್. ಮಂಜುನಾಥ್ ಏಪ್ರಿಲ್ 4ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಮಾರ್ಚ್ 30ರಂದು ಬಿ.ಎಸ್.ಪಿ. ಅಭ್ಯರ್ಥಿ ಚಿನ್ನಪ್ಪ ವೈ. ಚಿಕ್ಕಹಾಗಡೆ ನಾಮಪತ್ರ ಸಲ್ಲಿಸಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular