HomeKarnatakaರಾಮೇಶ್ವರಂ ಕೆಫೆ ಸ್ಪೋಟ ಕೇಸ್: ಮತ್ತಿಬ್ಬರು ಶಂಕಿತರು ವಶಕ್ಕೆ

ರಾಮೇಶ್ವರಂ ಕೆಫೆ ಸ್ಪೋಟ ಕೇಸ್: ಮತ್ತಿಬ್ಬರು ಶಂಕಿತರು ವಶಕ್ಕೆ

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರನ್ನು ರಾಷ್ಟ್ರೀಯ ತನಿಖಾ ದಳ(NIA) ವಶಕ್ಕೆ ಪಡೆದುಕೊಂಡಿದೆ.

ಶಂಕಿತರ ಜೊತೆ ಸಂಪರ್ಕ ಹೊಂದಿರುವ ಹಿನ್ನೆಲೆಯಲ್ಲಿ ಮತ್ತಿಬ್ಬರನ್ನು ವಶಕ್ಕೆ ಪಡೆಯಲಾಗಿದೆ. ನಿಷೇಧಿತ ಅಲ್ ಹಿಂದ್ ಟ್ರಸ್ಟ್ ಜೊತೆಗೆ ಶಂಕಿತರು ನಂಟು ಹೊಂದಿದ್ದರು. ಇಬ್ಬರನ್ನು ವಶಕ್ಕೆ ಪಡೆದ ಎನ್ಐಎ ವಿಚಾರಣೆ ನಡೆಸಿದೆ. ರಾಮೇಶ್ವರಂ ಕೆಫೆ ಸ್ಪೋಟ ಮತ್ತು ಹಳೆ ಸ್ಫೋಟ ಪ್ರಕರಣಗಳ ನಡುವೆ ಸಾಮ್ಯತೆ, ಹಳೆ ಪ್ರಕರಣದಲ್ಲಿ ಭಾಗಿಯಾದ ಹಲವರ ಮೇಲೆ ನಿಗಾವಹಿಸಿದೆ.

ಈಗಾಗಲೇ ಜೈಲಿನಲ್ಲಿರುವ ಹಲವರನ್ನು ಎನ್ಐಎ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ. ತಲೆಮರೆಸಿಕೊಂಡಿರುವ ಇನ್ನು ಹಲವರ ಮೇಲೆ ಕಣ್ಣಿಟ್ಟಿದ್ದು, ಶಂಕಿತರಿಗೆ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ನೆರವು ನೀಡಿದವರ ಮೇಲೆಯೂ ನಿಗಾವಹಿಸಲಾಗಿದೆ. ನೆರವು ನೀಡಿದವರನ್ನು ಪತ್ತೆ ಹಚ್ಚಿ ವಿಚಾರಣೆ ನಡೆಸಲಾಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular