ಬೆಂಗಳೂರು : ಮುಂದಿನ 5 ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಾ.28 ರಿಂದ ಏಪ್ರಿಲ್ 1 ರವರೆಗೆ ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಆದರೆ ಬೆಂಗಳೂರಿನಲ್ಲಿ ಮಾತ್ರ ಹೀಟ್ ವೇವ್ ಜಾಸ್ತಿಯಾಗಲಿದ್ದು, ಮಳೆಯಾಗುವ ಮುನ್ಸೂಚನೆಯಿಲ್ಲ.
ದಕ್ಷಿಣ ಒಳನಾಡಿನ ಶಿವಮೊಗ್ಗ, ದಾವಣಗೆರೆ ಸೇರಿ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಹಾಗೂ ಚಿಕ್ಕಮಗಳೂರು, ಉಡುಪಿ, ಬಾಗಲಕೋಟೆ, ಬೀದರ್ , ಮೈಸೂರು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕೂಡ ಮಳೆಯಾಗಬಹುದು.
ಉತ್ತರ ಒಳನಾಡಿನ ಹಾವೇರಿ, ಧಾರವಾಡ, ಗದಗ, ಕೊಪ್ಪಳ, ಬಾಗಲಕೋಟೆ, ವಿಜಯನಗರ ಮತ್ತು ವಿಜಯಪುರದಲ್ಲಿ ಮೋಡ ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ