ಬೆಂಗಳೂರು : ಬೆಂಗಳೂರು ಗ್ರಾಮಾಂತರದಲ್ಲಿ ಮತ್ತೋರ್ವ ಡಾ ಸಿಎನ್ ಮಂಜುನಾಥ್ ಕಣಕ್ಕೆ ಇಳಿದಿದ್ದು, ಕ್ಷೇತ್ರದಲ್ಲಿ ಹೊಸ ತಂತ್ರಗಾರಿಕೆ ಶುರುವಾಗಿದೆ.
ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಎದುರು ಹೃದಯ ತಜ್ಞ ಡಾ ಸಿಎನ್ ಮಂಜುನಾಥ್ ಬಿಜೆಪಿಯಿಂದ ಸ್ಪರ್ಧಿಸಿರುವ ವಿಚಾರ ನಿಮಗೆ ಗೊತ್ತಿದೆ. ಇದೀಗ ಬೆಂಗಳೂರು ಗ್ರಾಮಾಂತರದಲ್ಲಿ ಮತ್ತೊಬ್ಬ ಡಾ ಸಿಎನ್ ಮಂಜುನಾಥ್ ಕಣಕ್ಕಿಳಿಯುತ್ತಿದ್ದಾರೆ. ಬಿಜೆಪಿ ಅಭ್ಯರ್ಥಿ ಡಾ ಸಿಎನ್ ಮಂಜುನಾಥ್ ಎದುರು ಬಹುಜನ ಭಾರತ್ ಪಾರ್ಟಿಯಿಂದ ಡಾ ಸಿಎನ್ ಮಂಜುನಾಥ್ ಎನ್ನುವವರು ಬೆಂಗಳೂರು ಗ್ರಾಮಾಂತರದಲ್ಲಿ ಕಣಕ್ಕಿಳಿಯುತ್ತಿದ್ದಾರೆ. ಇಬ್ಬರು ಅಭ್ಯರ್ಥಿಗಳ ಹೆಸರು ಒಂದೇ ಆಗಿದ್ದು, ತಂದೆಯ ಹೆಸರು ಕೂಡ ಒಂದೇ ಆಗಿದೆ. ಈ ಹಿನ್ನೆಲೆ ಅಭ್ಯರ್ಥಿಗಳ ಸ್ಪರ್ಧೆ ಬಹಳ ಕುತೂಹಲ ಮೂಡಿದೆ.
ಒಂದೇ ಹೆಸರಿನ ಇಬ್ಬರು ಅಭ್ಯರ್ಥಿಗಳು ಒಂದೇ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುತ್ತಿದ್ದು, ಸಿನಿಮೀಯ ರೀತಿಯಲ್ಲಿ ಲೋಕಸಭಾ ಸಮರದಲ್ಲಿ ಹೊಸ ತಂತ್ರ ಮಾಡಲಾಗಿದ್ಯಾ ಎಂಬ ಪ್ರಶ್ನೆ ಮೂಡಿದೆ.